ಬೆಂಗಳೂರು: ಲೋಕಸಭೆ ಚುನಾವಣಾ ಪ್ರಚಾರಕ್ಕೆ ಹೊಸ ತಂತ್ರದ ಮೊರೆ ಹೋಗಿರುವ ಬಿಜೆಪಿ, ಏ.21 ಮತ್ತು 28ರಂದು “ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಎನ್ನುವ ಅಭಿಯಾನವನ್ನು ಕಾರ್ಯಕರ್ತರು ಹಾಗೂ ಮತದಾರರಿಂದಲೇ ಮಾಡಿಸಲು ಮುಂದಾಗಿದೆ.
ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಈ ಕುರಿತ ಪೋಸ್ಟರ್ ಹಾಗೂ ವಿಡಿಯೋ ಬಿಡುಗಡೆ ಮಾಡಿ ವಿವರಣೆ ನೀಡಿದ ರಾಜ್ಯ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ವಿ.ಸುನೀಲ್ ಕುಮಾರ್, ಈಗಾಗಲೇ ಪ್ರಚಾರದ ಭಾಗವಾಗಿ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ಸಭೆ, ಸಮಾವೇಶ, ರ್‍ಯಾಲಿ, ರೋಡ್ ಶೋಗಳನ್ನು ನಡೆಸುವುದರ ಜತೆಗೆ ಮನೆ-ಮನೆ ಪ್ರಚಾರ ಕಾರ್ಯ, ಮನೆಯಂಗಳದಲ್ಲಿ ನಡೆಯುವ ಸಂವಾದ ಸಭೆಗಳು ಬಿರುಸು ಪಡೆದಿವೆ ಎಂದರು.
ಇದರ ಜತೆಗೆ ಈ ಹೊಸ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಮೋದಿ ಪರವಾದ ಪ್ರಚಾರ ಕಾರ್ಯವನ್ನು ತಮ್ಮ ಮನೆಯ ಸುತ್ತಮುತ್ತ, ವ್ಯಾಪಾರ ಚಟುವಟಿಕೆಯ ಸುತ್ತಮುತ್ತ, ವಾಯುವಿಹಾರದ ಸ್ಥಳ, ಅಪಾರ್ಟ್‌ಮೆಂಟ್ ಸೇರಿದಂತೆ ತಂತಮ್ಮ ಸ್ಥಳದಲ್ಲಿ ಮೋದಿ ಪರವಾದ ಚಟುವಟಿಕೆಗಾಗಿ ಒಂದು ಭಾನುವಾರ ಮೀಸಲಿಡಲು ಮನವಿ ಮಾಡುತ್ತೇವೆ ಎಂದರು.
ಮೊದಲ ಹಂತ ಚುನಾವಣೆ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 28 ಸಾವಿರ ಬೂತ್‌ಗಳಿದ್ದು, ಪ್ರತಿ ಬೂತ್‌ನಲ್ಲಿ ತಲಾ ಕನಿಷ್ಠ 50 ಜನರು ಗುಂಪಾಗಿ ಮೋದಿಯ ಪರ ಚುನಾವಣಾ ಪ್ರಚಾರ ಮಾಡಲಿದ್ದಾರೆ. ಅದೇ ರೀತಿ ಏ.28 ರಂದು ಎರಡನೇ ಹಂತದ ಚುನಾವಣೆ ನಡೆಯುವ ಬೂತ್‌ಗಳಲ್ಲಿ ಪ್ರಚಾರ ನಡೆಸಲಿದ್ದಾರೆ ಎಂದು ವಿವರಣೆ ನೀಡಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…