Featured

ಏ.27 ಕ್ಕೆ ಮೂಡುಬಿದಿರಿಗೆ ಸಿಎಂ ಬೊಮ್ಮಾಯಿ ; ಮೂಲ್ಕಿ- ಮೂಡುಬಿದಿರೆ ಕ್ಷೇತ್ರ  ಅಭಿವೃದ್ಧಿ ಯೋಜನೆಗೆ ಶಿಲನ್ಯಾಸ -Vishwanews24

ಏ.27 ಕ್ಕೆ ಮೂಡುಬಿದಿರಿಗೆ ಸಿಎಂ ಬೊಮ್ಮಾಯಿ ; ಮೂಲ್ಕಿ- ಮೂಡುಬಿದಿರೆ ಕ್ಷೇತ್ರ  ಅಭಿವೃದ್ಧಿ ಯೋಜನೆಗೆ ಶಿಲನ್ಯಾಸ -Vishwanews24

ಮೂಡುಬಿದಿರೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಏಪ್ರಿಲ್‌ 27ರಂದು ಮೂಡುಬಿದಿರೆಗೆ ಆಗಮಿಸಲಿದ್ದು ತಾಲೂಕು ಆಡಳಿತ ಸೌಧ ಕಟ್ಟಡದ ಉದ್ಘಾಟನೆ ಮತ್ತು ಮೂಲ್ಕಿ- ಮೂಡುಬಿದಿರೆ ಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಶಾಸಕ ಉಮಾನಾಥ್‌ ಕೋಟ್ಯಾನ್‌ ಮೂಡುಬಿದಿರೆ ಕನ್ನಡ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕಾರ್ಯಕ್ರಮದ ವಿವರ ನೀಡಿದರು. ಕಳೆದ ನಾಲ್ಕು ವರುಷಗಳಲ್ಲಿ 100 ಕೋಟಿಗೂ ಮಿಕ್ಕಿದ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಸಲಾಗಿದ್ದು, ಕೇಂದ್ರ ಸರ್ಕಾರದ 400 ಕೋಟಿಗೂ ಮಿಕ್ಕಿದ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗಿದೆ ಎಂದರು.

27ರಂದು ಒಟ್ಟು 374.71 ಕೋಟಿ ಮೊತ್ತದ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದು, ಮಧ್ಯಾಹ್ನ 3 ಗಂಟೆಗೆ ಮೂಡುಬಿದಿರೆ ತಾಲೂಕು ಆಡಳಿತ ಸೌಧದ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆಯ ದರೆಗುಡ್ಡೆ ಮೆಟ್ರಿಕ್‌ ನಂತರದ ಬಾಲಕರ ವಿದ್ಯಾರ್ಥಿನಿಲಯ ಕಟ್ಟಡದ ಉದ್ಘಾಟನೆ, ಬನ್ನಡ್ಕದಲ್ಲಿ ನಿರ್ಮಾಣವಾಗಿರುವ ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಕಾಲೇಜಿನ ಉದ್ಘಾಟನೆ, ಮುಲ್ಕಿ ಸಮುದಾಯ ಆರೋಗ್ಯಕೇಂದ್ರದ ಹೊರರೋಗಿ ವಿಭಾಗದ ಉದ್ಘಾಟನೆ, ಲೋಕೋಪಯೋಗಿ ಇಲಾಖೆಯಡಿ ವಿದ್ಯಾಗಿರಿಯಿಂದ ಸ್ವರಾಜ್ಯ ಮೈದಾನದವರೆಗೆ ದ್ವಿಪಥ ಹಾಗೂ ರೋಟರಿ ಶಾಲೆ ಬಳಿಯಿಂದ ಮೆಸ್ಕಾಂ ಜಂಕ್ಷನ್‌ ವರೆಗೆ ಚತುಷ್ಪಥ ರಸ್ತೆಯ ಉದ್ಘಾಟನೆ, ಪುತ್ತಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಡಿಪ್ಪಾಡಿ ಮತ್ತು ತೆಂಕಮಿಜಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಳಾಯಂಗಡಿ ಬಳಿ ನಿರ್ಮಾಣವಾಗಿರುವ ಕಿಂಡಿ ಅಣೆಕಟ್ಟುಗಳ ಉದ್ಘಾಟನೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಳೆಯಂಗಡಿ ಇದರ ನೂತನ ಕಟ್ಟಡದ ಲೋಕಾರ್ಪಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಡಲಿದ್ದಾರೆ.

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್‌ ಕುಮಾರ್‌, ಸಂಸದ ನಳಿನ್‌ ಕುಮಾರ್‌ ಕಟೀಲು, ಮೀನುಗಾರಿಕಾ ಸಚಿವ ಎಸ್‌. ಅಂಗಾರ ಎಸ್‌, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕಂದಾಯ ಸಚಿವ ಆರ್‌. ಅಶೋಕ್‌, ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ. ಸೋಮಣ್ಣ, ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್‌, ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್‌್ಥ ನಾರಾಯಣ, ಆರೋಗ್ಯ ಸಚಿವ ಡಾ.ಕೆ. ಸುಧಾಕರ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ಪಾಟೀಲ್‌ ಸೇರಿದಂತೆ ಜಿಲ್ಲೆಯ ಎಲ್ಲ ಶಾಸಕರು ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ ಉಮಾನಾಥ ಕೋಟ್ಯಾನ್‌ ತಿಳಿಸಿದರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

6 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

8 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

8 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

8 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

9 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

9 hours ago