ಏ.29 ರಂದು ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ – vishwanews24

Featured, ದಕ್ಷಿಣ ಕನ್ನಡ

ಏ.29 ರಂದು ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

ಉಜಿರೆ : ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ 2026ರ ಏ.29ರಂದು ಸಂಜೆ 6.40ಕ್ಕೆ ಗೋಧೂಳಿ ಮುಹೂರ್ತದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ನಡೆಯಲಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. 2ನೇ ವಿವಾಹಕ್ಕೆ ಅವಕಾಶವಿಲ್ಲ.

ವರನಿಗೆ ಧೋತಿ, ಶಾಲು, ವಧುವಿಗೆ ಸೀರೆ, ರವಿಕೆ ಕಣ, ಮಂಗಳಸೂತ್ರ, ಹೂವಿನ ಹಾರ ನೀಡಲಾಗುವುದು. ಮದುವೆಯ ಸಂಪೂರ್ಣ ವೆಚ್ಚವನ್ನು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆಯ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ಭರಿಸುತ್ತದೆ.

ಬೆಳ್ತಂಗಡಿ : ದ್ವೇಷ ಭಾಷಣ ಪ್ರಕರಣ – ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಜಾಮೀನು ರಹಿತ ವಾರಂಟ್ – vishwanews24

ವರನಿಗೆ ಧೋತಿ, ಶಾಲು, ವಧುವಿಗೆ ಸೀರೆ, ರವಿಕೆ ಕಣ, ಮಂಗಳಸೂತ್ರ, ಹೂವಿನ ಹಾರ ನೀಡಲಾಗುವುದು. ಮದುವೆಯ ಸಂಪೂರ್ಣ ವೆಚ್ಚವನ್ನು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆಯ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ಭರಿಸುತ್ತದೆ.

‘ಮದುವೆ ಆಗಲು ಇಚ್ಛಿಸುವವರು 2026ರ ಏ. 25ರೊಳಗೆ ಸವಿವರ, ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ 08256- 266644, ವಾಟ್ಸ್ಆ್ಯಪ್ ಸಂಖ್ಯೆ 9663464648, 8147263422 ಸಂಪರ್ಕಿಸಬಹುದು.

ವರದಕ್ಷಿಣೆ, ಮದುವೆಯ ದುಂದುವೆಚ್ಚ ತಡೆಯಲು ವೀರೇಂದ್ರ ಹೆಗ್ಗಡೆ ಅವರು 1972ರಲ್ಲಿ ಉಚಿತ ಸಾಮೂಹಿಕ ವಿವಾಹ ಆರಂಭಿಸಿದ್ದರು. ಈ ವರೆಗೆ 13 ಸಾವಿರ ಜೋಡಿ ಮದುವೆಯಾಗಿದ್ದಾರೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.

ಎಕೆಎಂಎಸ್ ಬಸ್ ಮಾಲಕ ಕೊಲೆ ಪ್ರಕರಣ: ವಿದೇಶದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಅಕ್ರಂಗೆ ಲುಕ್‌ಔಟ್ ನೋಟೀಸ್ – vishwanews24

Leave a Reply