ಏ.8ಕ್ಕೆ ಮೈಸೂರಿಗೆ ಪ್ರಧಾನಿ ಮೋದಿ – Vishwanews24
ಏ.8ಕ್ಕೆ ಮೈಸೂರಿಗೆ ಪ್ರಧಾನಿ ಮೋದಿ
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಏ.8ರಂದು ವಿವಿಧ ಕಾರ್ಯಕ್ರಮ ನಿಮಿತ್ತ ಮೈಸೂರಿಗೆ ಆಗಮಿಸುತ್ತಿದ್ದು, ಮೋದಿ ಅವರ 2023ರಲ್ಲಿ ಮೈಸೂರಿನ ಮೊದಲ ಭೇಟಿ ಇದಾಗಿದೆ.
ಏ.8ರಂದು ರಾತ್ರಿ 8ಕ್ಕೆ ಮೈಸೂರಿಗೆ ಆಗಮಿಸುವ ಅವರು, ಖಾಸಗಿ ಹೋಟೆಲ್‌ನಲ್ಲಿ ತಂಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಎಸ್‌ಪಿಜಿ (ವಿಶೇಷ ಭದ್ರತಾ ಪಡೆ) ಆಗಮಿಸಿದ್ದು ಭದ್ರತೆ ಕುರಿತು ಅಧಿಕಾರಿಗಳ ಸಭೆ ನಡೆಸಿದೆ. ಎಡಿಜಿಪಿ ಅಲೋಕ್ ಕುಮಾರ್ ಕೂಡ ಮೈಸೂರಿಗೆ ಭೇಟಿ ನೀಡಿ, ಕೈಗೊಳ್ಳಬೇಕಿರುವ ಭದ್ರತಾ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಶನಿವಾರ ರಾತ್ರಿ 8.40ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ಅವರು ನಗರದ ಖಾಸಗಿ ಹೋಟೆಲ್‌ನಲ್ಲಿ ತಂಗಲಿದ್ದಾರೆ. ಬಳಿಕ ಏ.9ರಂದು ಬೆಳಗ್ಗೆ ಮೈಸೂರು ಹೆಲಿಪ್ಯಾಡ್‌ನಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಮೇಲುಕಾಮನಹಳ್ಳಿ ಹೆಲಿಪ್ಯಾಡ್‌ಗೆ ತೆರಳಲಿದ್ದಾರೆ. ಬಳಿಕ ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತಾರಣ್ಯ ಪ್ರದೇಶಕ್ಕೆ ರಸ್ತೆ ಮೂಲಕ ತೆರಳಿ, ಕಾಡಿನಲ್ಲಿ ಸಫಾರಿ ನಡೆಸಲಿದ್ದಾರೆ. ನಂತರ ಅರಣ್ಯ ಸಿಬ್ಬಂದಿಯೊಂದಿಗೆ ಸಂವಾದ ನಡೆಸಲಿದ್ದಾರೆ.
ಬಳಿಕ ತೆಪ್ಪಕಾಡು, ಮಧುಮಲೈ ಕಡೆಗೆ ತೆರಳಿ ಆಸ್ಕರ್ ಪ್ರಶಸ್ತಿ ಮೂಲಕ ವಿಶ್ವದ ಗಮನ ಸೆಳೆದ ಎಲಿಫ್ಯಾಂಟ್ ವಿಷ್ಪರರ್ಸ್ ತಂಡವನ್ನು ಭೇಟಿ ಮಾಡಲಿದ್ದಾರೆ. ನಂತರ ಹೆಲಿಕಾಪ್ಟರ್ ಮೂಲಕ 10.20ಕ್ಕೆ ಮತ್ತೆ ಮೈಸೂರಿಗೆ ಆಗಮಿಸಲಿzರೆ. ಬಳಿಕ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹುಲಿ ವರದಿ ಬಿಡುಗಡೆ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ದೇಶದ ನಾನಾ ರಾಜ್ಯಗಳು ಸೇರಿದಂತೆ ವಿದೇಶಗಳಿಂದಲೂ ಹಲವಾರು ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ನಂತರ ಮಧ್ಯಾಹ್ನ 12.40ಕ್ಕೆ ಮೈಸೂರಿನಿಂದ ಹೊರಡಲಿದ್ದಾರೆ ಎಂದು ಅರಣ್ಯ ಇಲಾಖೆ ಪ್ರಕಟಣೆ ತಿಳಿಸಿದೆ.
ಪ್ರಧಾನಿ ನರೇಂದ್ರ ಮೋದಿ ಏ.೯ರಂದು ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಬಂಡೀಪುರದಲ್ಲಿ ಅರಣ್ಯ ಇಲಾಖೆಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿಸಂಹಿತೆ ಜಾರಿಯಲ್ಲಿರುವುದರಿಂದ, ಚುನಾವಣಾ ಆಯೋಗದಿಂದ ಅನುಮತಿ ಪಡೆಯಲಾಗಿದೆ.
ಉಡುಪಿ: ನಾಟ್ಯದ 108 ಕರಣಗಳ ಮೂಲಕ 8ನೇ ವಿಶ್ವದಾಖಲೆ ಬರೆದ ಯೋಗ ಸಾಧಕಿ ತನುಶ್ರೀ – Vishwanews24
