Featured

ಏ.8ಕ್ಕೆ ಮೈಸೂರಿಗೆ ಪ್ರಧಾನಿ ಮೋದಿ  – Vishwanews24

ಏ.8ಕ್ಕೆ ಮೈಸೂರಿಗೆ ಪ್ರಧಾನಿ ಮೋದಿ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಏ.8ರಂದು ವಿವಿಧ ಕಾರ್ಯಕ್ರಮ ನಿಮಿತ್ತ ಮೈಸೂರಿಗೆ ಆಗಮಿಸುತ್ತಿದ್ದು, ಮೋದಿ ಅವರ 2023ರಲ್ಲಿ ಮೈಸೂರಿನ ಮೊದಲ ಭೇಟಿ ಇದಾಗಿದೆ.

ಏ.8ರಂದು ರಾತ್ರಿ 8ಕ್ಕೆ ಮೈಸೂರಿಗೆ ಆಗಮಿಸುವ ಅವರು, ಖಾಸಗಿ ಹೋಟೆಲ್‌ನಲ್ಲಿ ತಂಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಎಸ್‌ಪಿಜಿ (ವಿಶೇಷ ಭದ್ರತಾ ಪಡೆ) ಆಗಮಿಸಿದ್ದು ಭದ್ರತೆ ಕುರಿತು ಅಧಿಕಾರಿಗಳ ಸಭೆ ನಡೆಸಿದೆ. ಎಡಿಜಿಪಿ ಅಲೋಕ್ ಕುಮಾರ್ ಕೂಡ ಮೈಸೂರಿಗೆ ಭೇಟಿ ನೀಡಿ, ಕೈಗೊಳ್ಳಬೇಕಿರುವ ಭದ್ರತಾ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಶನಿವಾರ ರಾತ್ರಿ 8.40ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ಅವರು ನಗರದ ಖಾಸಗಿ ಹೋಟೆಲ್‌ನಲ್ಲಿ ತಂಗಲಿದ್ದಾರೆ. ಬಳಿಕ ಏ.9ರಂದು ಬೆಳಗ್ಗೆ ಮೈಸೂರು ಹೆಲಿಪ್ಯಾಡ್‌ನಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಮೇಲುಕಾಮನಹಳ್ಳಿ ಹೆಲಿಪ್ಯಾಡ್‌ಗೆ ತೆರಳಲಿದ್ದಾರೆ. ಬಳಿಕ ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತಾರಣ್ಯ ಪ್ರದೇಶಕ್ಕೆ ರಸ್ತೆ ಮೂಲಕ ತೆರಳಿ, ಕಾಡಿನಲ್ಲಿ ಸಫಾರಿ ನಡೆಸಲಿದ್ದಾರೆ. ನಂತರ ಅರಣ್ಯ ಸಿಬ್ಬಂದಿಯೊಂದಿಗೆ ಸಂವಾದ ನಡೆಸಲಿದ್ದಾರೆ.

ಬಳಿಕ ತೆಪ್ಪಕಾಡು, ಮಧುಮಲೈ ಕಡೆಗೆ ತೆರಳಿ ಆಸ್ಕರ್ ಪ್ರಶಸ್ತಿ ಮೂಲಕ ವಿಶ್ವದ ಗಮನ ಸೆಳೆದ ಎಲಿಫ್ಯಾಂಟ್ ವಿಷ್ಪರರ್ಸ್ ತಂಡವನ್ನು ಭೇಟಿ ಮಾಡಲಿದ್ದಾರೆ. ನಂತರ ಹೆಲಿಕಾಪ್ಟರ್ ಮೂಲಕ 10.20ಕ್ಕೆ ಮತ್ತೆ ಮೈಸೂರಿಗೆ ಆಗಮಿಸಲಿzರೆ. ಬಳಿಕ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹುಲಿ ವರದಿ ಬಿಡುಗಡೆ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ದೇಶದ ನಾನಾ ರಾಜ್ಯಗಳು ಸೇರಿದಂತೆ ವಿದೇಶಗಳಿಂದಲೂ ಹಲವಾರು ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ನಂತರ ಮಧ್ಯಾಹ್ನ 12.40ಕ್ಕೆ ಮೈಸೂರಿನಿಂದ ಹೊರಡಲಿದ್ದಾರೆ ಎಂದು ಅರಣ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿ ಏ.೯ರಂದು ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಬಂಡೀಪುರದಲ್ಲಿ ಅರಣ್ಯ ಇಲಾಖೆಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿಸಂಹಿತೆ ಜಾರಿಯಲ್ಲಿರುವುದರಿಂದ, ಚುನಾವಣಾ ಆಯೋಗದಿಂದ ಅನುಮತಿ ಪಡೆಯಲಾಗಿದೆ.

Vishwa News 24

Recent Posts

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

2 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

2 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

3 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

3 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

3 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

4 hours ago