ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಎಸ್‍ಐಟಿ ಅಧಿಕಾರಿಗಳು ಇಬ್ಬರೂ ಶಾಸಕರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.
ಐಎಂಎ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮನ್ಸೂರ್ ಖಾನ್ ವಿಚಾರಣೆಯನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಚುರುಕುಗೊಳಿಸಿದ್ದು, ಇತ್ತ ವಿಶೇಷ ತನಿಖಾ ತಂಡ(ಎಸ್‍ಐ) ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಮಾಜಿ ಸಚಿವ ಜಮೀರ್ ಅಹ್ಮದ್ ಹಾಗೂ ಶಾಸಕ ರೋಷನ್ ಬೇಗ್‍ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.
ಜು.29 ರಂದು ವಿಚಾರಣೆಗೆ ಹಾಜರಾಗುವಂತೆ ತನಿಖಾಧಿಕಾರಿಗಳು ಶಾಸಕರಿಬ್ಬರಿಗೆ ಸೂಚಿಸಿದ್ದಾರೆ. ಐಎಂಎ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮನ್ಸೂರ್ ಖಾನ್ ಜೊತೆ ಈ ಇಬ್ಬರೂ ಶಾಸಕರು ವ್ಯವಹಾರ ನಡೆಸಿರುವುದು ತನಿಖೆಯಿಂದ ತಿಳಿದುಬಂದಿದೆ.
ಈ ನಡುವೆ ಐಎಂಎ ಸಂಸ್ಥೆಯ ಲೆಕ್ಕ ಪರಿಶೋಧಕ ಆಗಿದ್ದ ಇಕ್ಬಾಲ್ ಖಾನ್‍ರನ್ನು ಎಸ್‍ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಕಂಪನಿಯ ಐಟಿ ರಿಟನ್ಸ್ನಲ್ಲಿ ಆದಾಯ ತೆರಿಗೆ ಇಲಾಖೆಗೆ ತಪ್ಪು ಮಾಹಿತಿ ನೀಡಿದ ಹಿನ್ನೆಲೆ ಇಕ್ಬಾಲ್ ರನ್ನು ಬಂಧಿಸಲಾಗಿದೆ. ಆರೋಪಿ ಇಕ್ಬಾಲ್ ಖಾನ್, ಮನ್ಸೂರ್ ಖಾನ್ ಜತೆ ಸೇರಿ ಅನೇಕ ಅವ್ಯವಹಾರಗಳಲ್ಲಿ ಭಾಗಿಯಾಗಿದ್ದ ಎಂಬುದು ಎಸ್‍ಐಟಿ ಅಧಿಕಾರಿಗಳಿಗೆ ವಿಚಾರಣೆ ವೇಳೆ ತಿಳಿದು ಬಂದಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…