Featured

ಐಎಎಸ್‌ ಅಧಿಕಾರಿ ಅಶ್ವಿನಿ ವೈಷ್ಣವ್‌ ನೂತನ ರೈಲ್ವೆ ಸಚಿವರಾಗಿ ಅಧಿಕಾರ ಸ್ವೀಕಾರ -Vishwanews24

ಐಎಎಸ್‌ ಅಧಿಕಾರಿ ಅಶ್ವಿನಿ ವೈಷ್ಣವ್‌ ನೂತನ ರೈಲ್ವೆ ಸಚಿವರಾಗಿ ಅಧಿಕಾರ ಸ್ವೀಕಾರ -Vishwanews24

ನವದೆಹಲಿ: ಆಡಳಿತಾಧಿಕಾರಿ, ಉದ್ಯಮಿಯಾಗಿ ನಂತರ ರಾಜಕೀಯ ಕ್ಷೇತ್ರವನ್ನು ಪ್ರವೇಶಿಸಿರುವ ಮಾಜಿ ಐಎಎಸ್‌ ಅಧಿಕಾರಿ ಅಶ್ವಿನಿ ವೈಷ್ಣವ್‌ ಅವರು ನೂತನ ರೈಲ್ವೆ ಸಚಿವರಾಗಿ ಗುರುವಾರ ಅಧಿಕಾರ ಸ್ವೀಕರಿಸಿದರು.

ಒಡಿಶಾ ರಾಜ್ಯದಿಂದ ರಾಜ್ಯಸಭಾ ಸದಸ್ಯರಾಗಿರುವ ಅಶ್ವಿನಿ ವೈಷ್ಣವ್‌ ಅವರು ಅಧಿಕಾರವಹಿಸಿಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ’67 ವರ್ಷಗಳಲ್ಲಿ ರೈಲ್ವೆ ಸಚಿವಾಲಯದಲ್ಲಿ ಅತ್ಯುತ್ತಮ ಕಾರ್ಯಗಳು ನಡೆದಿವೆ. ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ಯೋಜನೆಗಳನ್ನು ಪರಿಪೂರ್ಣಗೊಳಿಸಲು ನಾನು ಪ್ರಯತ್ನಿಸುತ್ತೇನೆ‘ ಎಂದರು.

ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದಿಂದ ಎಂಬಿಎ ಪದವಿ, ಖರಗ್‌ಪುರ –ಐಐಟಿಯಿಂದ ಎಂ.ಟೆಕ್ ಪದವಿ ಪಡೆದಿರುವ ವೈಷ್ಣವ್ ಅವರು, ಜಾಗತಿಕ ಮಟ್ಟದ ಜನರಲ್ ಎಲೆಕ್ಟ್ರಿಕಲ್ಸ್ ಮತ್ತು ಸೀಮನ್ಸ್‌ ನಂತಹ ಪ್ರಮುಖ ಕಂಪನಿಗಳನ್ನು ಮುನ್ನಡೆಸುವಲ್ಲಿ ಪ್ರಧಾನ ಪಾತ್ರವಹಿಸಿದ್ದರು.

1994ರ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿದ್ದ ಅಶ್ವಿನಿ ವೈಷ್ಣವ್‌, ಹದಿನೈದು ವರ್ಷಗಳ ತಮ್ಮ ಅಧಿಕಾರಾವಧಿಯಲ್ಲಿ ಪ್ರಮುಖವಾದ ಜವಾಬ್ದಾರಿಗಳನ್ನು ನಿರ್ವಹಿಸುವ ಜತೆಗೆ, ಮೂಲಸೌಕರ್ಯ ಅಭಿವೃದ್ಧಿ ಕ್ಷೇತ್ರದಲ್ಲಿ ಸಾರ್ವಜನಿಕ–ಖಾಸಗಿ ಸಹಭಾಗಿತ್ವ(ಪಿಪಿಪಿ) ಯೋಜನೆಗೆ ಒಂದು ಉತ್ತಮ ಚೌಕಟ್ಟನ್ನು ರೂಪಿಸಿದ್ದರು. ಈ ಅನುಭವ, ತಾವು ನಿರ್ವಹಿಸುವ ರೈಲ್ವೆ ಕ್ಷೇತ್ರದ ಅಭಿವೃದ್ಧಿಗೆ ಸಹಾಯವಾಗಲಿದೆ.

ರೈಲ್ವೆ ಸಚಿವರಾಗಿರುವ ವೈಷ್ಣವ್ ಅವರಿಗೆ ದೂರಸಂಪರ್ಕ ಮತ್ತು ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಜವಾಬ್ದಾರಿಯನ್ನೂ ವಹಿಸಲಾಗಿದೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

7 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

7 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

8 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

8 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

8 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

8 hours ago