Featured

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧದ ಸಾಮಾಜಿಕ ಜಾಲತಾಣ ಪೋಸ್ಟ್‌ ತೆಗೆದುಹಾಕುವಂತೆ ಐಪಿಎಸ್‌ ಅಧಿಕಾರಿ ರೂಪಾಗೆ ಸುಪ್ರೀಂ ಸೂಚನೆ – vishwanews24

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧದ ಸಾಮಾಜಿಕ ಜಾಲತಾಣ ಪೋಸ್ಟ್‌ ತೆಗೆದುಹಾಕುವಂತೆ ಐಪಿಎಸ್‌ ಅಧಿಕಾರಿ ರೂಪಾಗೆ ಸುಪ್ರೀಂ ಸೂಚನೆ

ಹೊಸದಿಲ್ಲಿ: ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಮಾಡಿರುವ ಸಾಮಾಜಿಕ ಜಾಲತಾಣ ಪೋಸ್ಟ್‌ಗಳನ್ನು ತೆಗೆದುಹಾಕುವಂತೆ ಐಪಿಎಸ್‌ ಅಧಿಕಾರಿ ಡಿ. ರೂಪಾ ಅವರಿಗೆ ಸುಪ್ರೀಂ ಕೋರ್ಟ್‌ ಗುರುವಾರ ಆದೇಶ ನೀಡಿದೆ.

ಸಿಂಧೂರಿ ಅವರು ದಾಖಲಿಸಿರುವ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ರೂಪಾ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಮೇಲಿನ ಆದೇಶ ನೀಡಿದೆ.

ಕರ್ನಾಟಕದ ಇಬ್ಬರು ಮಹಿಳಾ ಅಧಿಕಾರಿಗಳಿಗೂ ಈ ವಿವಾದವನ್ನು ಮಾತುಕತೆ ಮೂಲಕ ಇತ್ಯರ್ಥಪಡಿಸುವಂತೆ ಡಿಸೆಂಬರ್‌ 13ರಂದು ನ್ಯಾಯಾಲಯ ಸಲಹೆ ನೀಡಿತ್ತು. ಆದರೆ ಮಾತುಕತೆ ಮತ್ತು ಸಂಧಾನ ಸಾಧ್ಯವಿಲ್ಲ ಎಂದು ಇಬ್ಬರೂ ಅಧಿಕಾರಿಗಳು ವಿಚಾರಣೆ ವೇಳೆ ಹೇಳಿದ್ದರು.

ಗುರುವಾರ ಈ ವಿಚಾರ ಪ್ರಸ್ತಾಪಿಸಿದ ನ್ಯಾಯಪೀಠ ಇಬ್ಬರು ಅಧಿಕಾರಿಗಳೂ ಸೌಹಾರ್ದಯುತವಾಗಿ ಪರಿಹರಿಸಲು ಮುಂದಾಗದೇ ಇರುವುದಕ್ಕೆ ತನ್ನ ನಿರಾಸೆ ವ್ಯಕ್ತಪಡಿಸಿದೆ.

“ಐಎಎಸ್‌, ಐಪಿಎಸ್‌ ಅಧಿಕಾರಿಗಳು ಈ ರೀತಿ ಕಚ್ಚಾಡಿಕೊಂಡರೆ ಆಡಳಿತ ಹೇಗೆ ಸಾಧ್ಯ,” ಎಂದು ನ್ಯಾಯಮೂರ್ತಿಗಳಾದ ಎಸ್‌ ಓಕಾ ಮತ್ತು ಪಂಕಜ್‌ ಮಿತ್ತಲ್‌ ಅವರ ಪೀಠ ಪ್ರಶ್ನಿಸಿದೆ.

ಐಪಿಎಸ್‌ ಅಧಿಕಾರಿ ರೂಪಾ ಅವರು ರೋಹಿಣಿ ಅವರ ಖಾಸಗಿ ಚಿತ್ರಗಳನ್ನು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ನಂತರ ಇಬ್ಬರು ಮಹಿಳಾ ಅಧಿಕಾರಿಗಳ ನಡುವೆ ವಿವಾದ ಇನ್ನಷ್ಟು ತೀವ್ರಗೊಂಡಿತ್ತು. ರೂಪಾ ಅವರು ರೋಹಿಣಿ ವಿರುದ್ಧ ಭ್ರಷ್ಟಾಚಾರ ಸೇರಿದಂತೆ 19 ಆರೋಪ ಹೊರಿಸಿದ್ದಾರೆ ಹಾಗೂ ತನಿಖೆ ನಡೆಸುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗೂ ಪತ್ರ ಬರೆದಿದ್ದರು.

ಇದರ ಬೆನ್ನಲ್ಲೇ ಸಿಂಧೂರಿ ಅವರು ರೂಪಾ ವಿರುದ್ಧ ಮಾನನಷ್ಟ ಪ್ರಕರಣ ದಾಖಲಿಸಿದ್ದರು.

ರೂಪಾ ತಾವು ತೆಗೆದುಹಾಕಿದ ಸಾಮಾಜಿಕ ಜಾಲತಾಣ ಪೋಸ್ಟ್‌ಗಳ ಕುರಿತು ವಿವರ ನೀಡುವಂತೆ ನ್ಯಾಯಾಲಯ ಹೇಳಿದೆ. ಒಂದು ವೇಳೆ ಯಾವುದೇ ಕಾರಣಕ್ಕೂ ಪೋಸ್ಟ್‌ಗಳನ್ನು ಅಳಿಸಲು ಸಾಧ್ಯವಾಗದೇ ಇದ್ದರೆ ರೋಹಿಣಿ ವಿರುದ್ಧದ ಹೇಳಿಕೆಗಳನ್ನು ವಾಪಸ್‌ ಪಡೆದ ಕುರಿತು ಸ್ಪಷ್ಟೀಕರಣ ನೀಡಿ ಒಂದು ಪೋಸ್ಟ್‌ ಹಾಕಬೇಕು, ಇಡೀ ವಿವಾದ ಅಂತ್ಯಗೊಳಿಸುವುದು ನ್ಯಾಯಾಲಯದ ಉದ್ದೇಶ ಎಂದು ನ್ಯಾಯಪೀಠ ಹೇಳಿದೆ.

Vishwa News 24

Recent Posts

ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು : ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ – vishwanews24

ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು - ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ…

1 minute ago

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ – vishwanews24

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು…

12 minutes ago

ಬೆಳ್ತಂಗಡಿ : ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಮೃತ್ಯು – vishwanews24

ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು…

17 minutes ago

ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…

31 minutes ago

ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋದ ತಾಯಿ ಸಾವು – vishwanews24

ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋದ ತಾಯಿ ನೀರಿನಲ್ಲಿ ಮುಳುಗಿ ಸಾವು ಚಿಕ್ಕಬಳ್ಳಾಪುರ: ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋದ…

59 minutes ago

ಮಲ್ಪೆ ಬಂದರಿನಲ್ಲಿ ಹೊಡೆದಾಟ: 2 ಪ್ರತ್ಯೇಕ ಪ್ರಕರಣ ದಾಖಲು – vishwanews24

ಮಲ್ಪೆ ಬಂದರಿನಲ್ಲಿ ಹೊಡೆದಾಟ: 2 ಪ್ರತ್ಯೇಕ ಪ್ರಕರಣ ದಾಖಲು ಉಡುಪಿ: ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿ ಮೀನುಗಾರರ ಎರಡು ತಂಡಗಳ ನಡುವೆ…

1 hour ago