ಮಂಗಳೂರು : ಜಯ ಸುವರ್ಣ ಸಂಸ್ಮರಣೆಯ ಅಂಗವಾಗಿ ಜಯ ಸಿ ಸುವರ್ಣ ಜನಸೇವಾ ಪುರಸ್ಕಾರ ಶಿವಗಿರಿ ಸಮ್ಮಾನ್ ಪ್ರಶಸ್ತಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಆಯ್ಕೆಯಾಗಿದ್ದಾರೆ.
ಸೆಪ್ಟಂಬರ್ 7 ರಂದು ಭಾನುವಾರ ಮುಂಬಯಿಯ ಜಯಲೀಲಾ ಬ್ಯಾಂಕ್ವೆಟ್ ಹಾಲ್ ಗೋರೆಗಾಂವ್ ಪೂರ್ವ ಇಲ್ಲಿ ಜಯ ಸಿ ಸುವರ್ಣ ಅಭಿಮಾನಿಗಳು ಮತ್ತು ಮುಂಬಯಿ ಬಿಲ್ಲವರು ಆಯೋಜಿಸಿರುವ 171 ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆಯ ಸಮಾರಂಭದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಐಕಳ ಹರೀಶ್ ಶೆಟ್ಟಿ ಅವರನ್ನು ಸನ್ಮಾನಿಸಲಾಗುತ್ತದೆ.
ಐಕಳ ಹರೀಶ್ ಶೆಟ್ಟಿ ಅವರು ವಿಶ್ವಮಟ್ಟದಲ್ಲಿ ಸಮಾಜಸೇವೆಯ ಮೂಲಕ ಗುರುತಿಸಿಕೊಂಡವರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಜೊತೆಗೆ ನೂರಕ್ಕೂ ಮಿಕ್ಕಿದ ಸನ್ಮಾನ, ಪ್ರಶಸ್ತಿ ಪುರಸ್ಕಾರಗಳನ್ನು ಪಡೆದಿರುವ ಐಕಳ ಅವರ ಸಮಾಜ ಸೇವೆ, ಸಂಘಟನಾ ಚತುರತೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…