ಕುಂದಾಪುರ: ಐತಿಹಾಸಿಕ ಬಸ್ರೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳ್ಳರು ಕೈಚಳಕ ತೋರಿ 2 ಲಕ್ಷ ಮೌಲ್ಯದ ಮುಖವಾಡ ಕಳವುಗೈದಿದ್ದಾರೆ. ದೇವಸ್ಥಾನದ ಹಿಂಭಾಗದ ಬೀಗ ಮುರಿದು ಒಳ ಪ್ರವೇಶಿಸಿದ ಕಳ್ಳರು ದೇವಿಗೆ ಹಾಕಲಾಗಿದ್ದ ಸುಮಾರು ಎರಡು ಕೆಜಿ ಬೆಳ್ಳಿಯ ಮುಖವಾಡ ಮತ್ತು ಗಣಪತಿಗೆ ಹಾಕಲಾಗಿದ್ದ ಎರಡು ಕೆಜಿ ಬೆಳ್ಳಿ ಮುಖವಾಡ ಕಳವುಗೈದಿದ್ದಾರೆ.
ಜು .29 ರ ಭಾನುವಾರ ರಾತ್ರಿ ಸುಮಾರು 1 ಗಂಟೆಗೆ ಒಳ ನುಗ್ಗಿದ್ದ ಕಳ್ಳರು ದೇವಸ್ಥಾನದ ಪಕ್ಕದಲ್ಲಿ ಅರ್ಚಕರು ಮಲಗಿದ್ದ ಕೋಣೆಗೆ ಹೊರಗಿನಿಂದ ಚಿಲಕ ಹಾಕಿ ಬಂಧಿಸಿ ಕಳ್ಳತನವೆಸಗಿದ್ದಾರೆ. ದೇವಸ್ಥಾನದ ಪ್ರಧಾನ ಗರ್ಭಗುಡಿಕ್ಕೂ ಪ್ರವೇಶಿಸಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದಾಗ ಸೈರನ್ ಮೊಳಗಿ ಕಳ್ಳರು ಪರಾರಿಯಾಗಿದ್ದಾರೆ. ಸೈರನ್ ಶಬ್ದಕ್ಕೆ ಎಚ್ಚೆತ್ತ ಅರ್ಚಕರು ಮತ್ತು ಸಿಬ್ಬಂದಿಗಳು ಹೊರಗಿನಿಂದ ಚಿಲಕ ಹಾಕಿದ್ದ ಹಿನ್ನಲೆಯಲ್ಲಿ ಹೊರಕ್ಕೆ ಬರಲಾಗದೆ ಅಸಹಾಯಕರಾಗಿದ್ದಾರೆ.
ಸೈರನ್ ಸದ್ದಿಗೆ ಎಚ್ಚೆತ್ತ ಗ್ರಾಮಸ್ಥರು ಕಳ್ಳರಿಗಾಗಿ ಹುಡುಕಾಟ ನಡೆಸಿದ್ದಾರೆ, ಆದರೆ ಚಲಾಕಿ ಚೋರರು ದೇವಸ್ಥಾನದ ಹಿಂಭಾಗದ ಅನ್ಗಳ್ಳಿ ಸಂಪರ್ಕ ರಸ್ತೆಯಿಂದ ಪರಾರಿಯಾಗಿರುವ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಇನ್ನು ಸ್ಥಳಕ್ಕೆ ಧಾವಿಸಿ ಬಂದ ಕಂಡ್ಲೂರು ಪೊಲೀಸರು ಪರಿಶೀಲನೆ ನಡೆಸಿ ಸಿಸಿ ಟಿವಿ ಪರಿಶೀಲಶಿದ್ದಾರೆ. , ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ.
ಜಾಹಿರಾತು: vyshali Bar& Family Restaurant kaup:
prop: NAYESH P SHETTY: 9620427036
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…