ಐತಿಹಾಸಿಕ ಅನ್ಯಾಯವನ್ನು ಸರಿಪಡಿಸಲು ಹಾಗೂ ನೀಡಿದ್ದ ಆಶ್ವಾಸನೆ ಈಡೇರಿಸಲು ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ: ಪ್ರಧಾನಿ ಮೋದಿ -Vishwanews24

ನವದೆಹಲಿ: ಐತಿಹಾಸಿಕ ಅನ್ಯಾಯವನ್ನು ಸರಿಪಡಿಸಲು ಹಾಗೂ ನೆರೆಯ ರಾಷ್ಟ್ರಗಳಲ್ಲಿರುವ ಧಾರ್ಮಿಕ ಅಲ್ಪಸಂಖ್ಯಾತರಿಗೆ ಬಿಜೆಪಿ ನೀಡಿದ್ದ ಆಶ್ವಾಸನೆ ಈಡೇರಿಸಲು  ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ವಾರ್ಷಿಕ ಪ್ರಧಾನ ಮಂತ್ರಿಗಳ ಎನ್ ಸಿಸಿ ರ‍್ಯಾಲಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯದ ನಂತರವೂ ಜಮ್ಮು ಮತ್ತು ಕಾಶ್ಮೀರದಲ್ಲಿ ಸಮಸ್ಯೆ ಮುಂದುವರೆದಿತ್ತು. ಕೆಲ ಕುಟುಂಬಗಳು ಮತ್ತು ರಾಜಕೀಯ ಪಕ್ಷಗಳು ಈ ಪ್ರದೇಶದಲ್ಲಿನ ಸಮಸ್ಯೆಗಳನ್ನು ಜೀವಂತವಾಗಿ” ಇಟ್ಟುಕೊಂಡಿದ್ದರ  ಪರಿಣಾಮವಾಗಿ ಅಲ್ಲಿ ಭಯೋತ್ಪಾದನೆ ಬೆಳೆದಿತ್ತು ಎಂದರು. ಪ್ರಸ್ತುತ ಸರ್ಕಾರವು ದೇಶವನ್ನು ಬಾಧಿಸುತ್ತಿರುವ ದಶಕಗಳಷ್ಟು ಹಳೆಯದಾದ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುತ್ತಿದೆ ಎಂದು ತಿಳಿಸಿದರು.

 

ಪ್ರಸ್ತುತ ಜಮ್ಮು- ಕಾಶ್ಮೀರ ಮಾತ್ರವಲ್ಲ, ದೇಶದ ಎಲ್ಲಾ ಕಡೆಗಳಲ್ಲಿ ಶಾಂತಿ ನೆಲೆಸಿದೆ. ದಶಕಗಳ ಕಾಲ ನಿರ್ಲಕ್ಷಿಸಲ್ಪಟ್ಟಿದ್ದ ಈಶಾನ್ಯ ವಲಯದ ಆಶೋತ್ತರಗಳನ್ನು ಸರ್ಕಾರ ನಿರ್ವಹಿಸುತ್ತಿದೆ. ಬೊಡೋ ಒಪ್ಪಂದ, ತ್ರಿವಳಿ ತಲಾಕ್, ಜಮ್ಮು- ಕಾಶ್ಮೀರಕ್ಕೆ ಸಂಬಂಧಿಸಿದ ಸಂವಿಧಾನದ 370 ನೇ ವಿಧಿ ರದ್ದು ಸೇರಿದಂತೆ ಅನೇಕ ಸಾಧನೆಗಳನ್ನು ಮಾಡಲಾಗಿದೆ ಎಂದು ಪ್ರಧಾನಿ ವಿವರಿಸಿದರು.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

3 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

3 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

3 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

3 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

3 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

3 days ago