Featured

ಐತಿಹಾಸಿಕ ಪರಂಪರೆಗೆ ಕುಂದುಬಾರದಂತೆ ಮೈಸೂರು ದಸರಾವನ್ನು ಆಚರಿಸಲು ಎಲ್ಲಾ ಇಲಾಖೆಗಳು ಶ್ರಮಿಸಬೇಕು : ವಿ. ಸೋಮಣ್ಣ -Vishwanews24

ಮೈಸೂರು: ಐತಿಹಾಸಿಕ ಪರಂಪರೆಗೆ ಕುಂದುಬಾರದಂತೆ ಅತ್ಯಂತ ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ಮೈಸೂರು ದಸರಾವನ್ನು ಆಚರಿಸಲು ಎಲ್ಲಾ ಇಲಾಖೆಗಳು ಶ್ರಮಿಸಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಹೇಳಿದ್ದಾರೆ.

ದಸರಾ ಮಹೋತ್ಸವ ಸಿದ್ದತೆ ಕುರಿತು ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪರಿಶೀಲನ ಸಭೆ ನಡೆಸಿದ ಅವರು ಈ ವರ್ಷ ದಸರಾ ಮಹೋತ್ಸವ ಇನ್ನೂ ಭಕ್ತಿಯಿಂದ ಹೊಸ ನಾವಿನ್ಯತೆ ಜೊತೆಗೆ ಆಚರಿಸಬೇಕಿದೆ. ಇದಕ್ಕೆ ಎಲ್ಲಾ ಇಲಾಖೆ ಅಧಿಕಾರಿ, ಸಿಬ್ಬಂದಿ ಸಂಪೂರ್ಣವಾಗಿ ತೊಡಗಿಸಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ದಸರಾ ಸಂಘಟನೆಗೆ ಯಾವುದೇ ಅನುದಾನದ ಕೊರತೆ ಇಲ್ಲ. ಅಗತ್ಯ ಪ್ರಮಾಣದ ಹಣ ಸರ್ಕಾರದಿಂದ ದೊರೆಯಲಿದೆ. ಆದರೆ ಅನುದಾನದಲ್ಲಿ ಒಂದು ರೂಪಾಯಿ ಕೂಡ ದುರ್ಬಳಕೆಯಾಗದಂತೆ ವ್ಯವಸ್ಥಿತವಾಗಿ ಹೆಚ್ಚು ಮೆರುಗಿನಿಂದ ಸಾಂಸ್ಕೃತಿಕ ನೆಲಗಟ್ಟಿನಲ್ಲಿ ನಾಡಹಬ್ಬ ಸಂಘಟನೆಯಾಗಬೇಕು ಎಂದು ಸಚಿವರು ಹೇಳಿದರು.

ಇದು ಜನರ ಉತ್ಸವವಾಗಬೇಕು, ಎಲ್ಲ ಜನಪ್ರತಿನಿಧಿಗಳು ಸಂಘಸಂಸ್ಥೆಗಳನ್ನು ಒಳಗೊಂಡಂತೆ ಗ್ರಾಮಮಟ್ಟದಲ್ಲಿ ಮನೆ ಮನೆಗಳಲ್ಲಿ ದಸರಾ ನಡೆಯುವಂತಾಗಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳು, ಕ್ರೀಡೆ, ಫಲಪುಷ್ಪ ಪ್ರದರ್ಶನ, ಲಲಿತಕಲೆ, ಸೇರಿದಂತೆ ಎಲ್ಲಾ ಚಟುವಟಿಕೆಗಳಲ್ಲಿ ವೈವಿಧ್ಯತೆ ಗುಣಮಟ್ಟ ಕೂಡಿರಬೇಕು. ಇದಕ್ಕೆ ಉಪಸಮಿತಿಗಳು ಶ್ರಮಿಸಬೇಕು ಎಂದು ತಿಳಿಸಿದರು.

ವಿದ್ಯುತ್ ದೀಪಾಲಂಕಾರ ಹಿಂದೆಂದಿಗಿಂತಲೂ ಉತ್ತಮವಾಗಬೇಕು. ಲೋಕಸಭಾ ಸದಸ್ಯರು, ಶಾಸಕರು, ಜಿಲ್ಲಾ ಪಂಚಾಯತ್ ಅಧ್ಯಕ್ಷರು, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆಗಳು, ಜನಪ್ರತಿನಿಧಿಗಳ ಸಲಹೆ, ಸಹಕಾರ ಪಡೆದು ವೈಶಿಷ್ಟಪೂರ್ಣವಾಗಿ ದಸರಾ ಆಚರಣೆ ಮಾಡಬೇಕು ಎಂದು ಹೇಳಿದರು.

ಲೋಕಸಭಾ ಸದಸ್ಯರಾದ ಪ್ರತಾಪ್ ಸಿಂಹ, ಶಾಸಕ ನಾಗೇಂದ್ರ, ಜಿಲ್ಲಾಧಿಕಾರಿ ಅಭಿರಾಂ.ಜಿ. ಶಂಕರ್, ಅವರು ಎಸ್ಪಿ ರಿಷ್ಯಾಂತ್, ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ, ಜಿಪಂ ಸಿಇಓ ಕೆ.ಜ್ಯೋತಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತ ಪಿ.ಎಸ್. ಕಾಂತರಾಜು, ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago