ವಿಜಯನಗರ: ಐತಿಹಾಸಿಕ ಹಂಪಿ ಕೋಟೆಯ ಕಲ್ಲಿನ ಗೋಡೆ ಶುಕ್ರವಾರ ಬೆಳಗ್ಗೆ ಕುಸಿದು ಬಿದ್ದಿದೆ.
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಹಂಪಿ ಕಮಲ ಮಹಲ್ ಸ್ಮಾರಕ ಸುತ್ತಲಿನ ಕಲ್ಲಿನ ಕೋಟೆ ಗೋಡೆಯ ಒಂದು ಭಾಗ ಶುಕ್ರವಾರ ಬೆಳಿಗ್ಗೆ ಕುಸಿದು ಬಿದ್ದಿದೆ. ಕಲ್ಲುಗಳಿಂದ ನಿರ್ಮಿಸಿದ್ದ ಗೋಡೆಯ ಒಂದು ಭಾಗ ಭಾಗಶಃ ಕುಸಿದಿದ್ದು, ಪುರಾತನ ಗೋಡೆಯಾಗಿರುವುದರಿಂದ ಕುಸಿದು ಬಿದ್ದಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಕೋಟೆಯ ಹೊರ ಭಾಗದ ಗೋಡೆ ಕುಸಿದಿದ್ದು, ಅದೃಷ್ಟವಶಾತ್ ಇದರಿಂದ ಕೋಟೆ ಆವರಣದಲ್ಲಿನ ಸ್ಮಾರಕಗಳಿಗೆ ಹಾನಿಯಾಗಿಲ್ಲ. ಒಂದು ವೇಳೆ ಗೋಡೆ ಕೋಟೆಯ ಒಳಭಾಗದಲ್ಲಿ ಬಿದ್ದಿದ್ದರೆ ಒಳಭಾಗದಲ್ಲಿದ್ದ ಪುರಾತನ ಕಾಲುವೆಗೆ ಹಾನಿಯಾಗುವ ಸಂಭವವಿತ್ತು ಎನ್ನಲಾಗಿದೆ. ಅಲ್ಲದೆ ಗೋಡೆ ಕುಸಿದಾಗ ಘಟನಾ ಪ್ರದೇಶದಲ್ಲಿ ಯಾರೂ ಇರಲಿಲ್ಲ. ಇದರಿಂದ ಯಾವುದೇ ಜೀವಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…