Featured

ಐದು ಗ್ಯಾರಂಟಿಗಳಲ್ಲಿ ಎರಡನ್ನು ಕೈ ಬಿಡಬೇಕೆಂದು ಮುಖ್ಯಮಂತ್ರಿಗೆ ಕಾಂಗ್ರೆಸ್ ಶಾಸಕ ಮನವಿ – vishwanews24

ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸದಿದ್ರೆ ಅನುದಾನ ಬರೋದಿಲ್ಲ:  ಕಾಂಗ್ರೆಸ್‌ ಶಾಸಕ ಗವಿಯಪ್ಪ

ಬೆಂಗಳೂರು: ಕಾಂಗ್ರೆಸ್ ಸರಕಾರ ಉಪಚುನಾವಣೆಯ ಕ್ಲೀನ್‌ ಸ್ವೀಪ್ ಗೆಲುವಿಗೆ ಪಂಚ ಗ್ಯಾರಂಟಿಗಳೇ ಕಾರಣ ಎಂದು ಹೇಳುತ್ತಿದ್ದರೂ ಗ್ಯಾರಂಟಿಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಆಕ್ಷೇಪ ಎತ್ತಲು ತೊಡಗಿದ್ದಾರೆ. ಐದು ಗ್ಯಾರಂಟಿಗಳಲ್ಲಿ ಎರಡನ್ನು ಕೈ ಬಿಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡುತ್ತೇನೆ ಎಂದು ಕಾಂಗ್ರೆಸ್ ಪಕ್ಷದ ಶಾಸಕ ಗವಿಯಪ್ಪ ಹೇಳಿದ್ದಾರೆ.

ಗ್ಯಾರಂಟಿಗಳಿಂದ ಆಶ್ರಯ ಮನೆಗಳು ಬರುತ್ತಿಲ್ಲ. ಶಕ್ತಿ ಯೋಜನೆ ಸೇರಿದಂತೆ ಇನ್ನೆರಡು ಗ್ಯಾರಂಟಿಗಳು ಕಡಿಮೆ ಮಾಡಲು ಮುಖ್ಯಮಂತ್ರಿಗಳಿಗೆ ಹೇಳುತ್ತೇವೆ. ಅವರೇನು ತೀರ್ಮಾನ ಮಾಡುತ್ತಾರೆ ನೋಡೋಣ ಎಂದು ಹೇಳಿದ್ದಾರೆ.

ನಮ್ಮ ಕ್ಷೇತ್ರಕ್ಕೆ ಸರ್ಕಾರದಿಂದ ಯಾವುದೇ ಅನುದಾನ ಬರುತ್ತಿಲ್ಲ. ಇದಕ್ಕೆ ಸ್ಥಳೀಯ ಕಾಂಗ್ರೆಸ್ ಮುಖಂಡರೇ ಶಾಸಕರ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಶಾಸಕ ಎಚ್.ಆರ್ ಗವಿಯಪ್ಪ ಹೊಸಪೇಟೆ ಪಾಲಿಗೆ ಶಾಪವಾಗಿದ್ದಾರೆ ಎಂದು ಹುಡಾ ಅಧ್ಯಕ್ಷ ಇಮಾಮ್ ನಿಯಾಜಿ ಕಿಡಿಕಾರಿದ್ದರು. ಐದು ಗ್ಯಾರಂಟಿಗಳನ್ನು ಸಮರ್ಪಕವಾಗಿ ನೀಡಲು ಸರ್ಕಾರದ ಬಳಿ ಹಣವಿಲ್ಲ ಎಂದು ವಿಪಕ್ಷಗಳು ಆರೋಪ ಮಾಡುತ್ತಿರುವ ನಡುವೆಯೇ ಸ್ವತಃ ಕಾಂಗ್ರೆಸ್ ಪಕ್ಷದ ಶಾಸಕರ ಈ ಹೇಳಿಕೆಗಳು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಅನುದಾನವಿಲ್ಲದೆ ಜನರ ಆಕ್ರೋಶಕ್ಕೆ ತುತ್ತಾಗುವ ಭೀತಿಯಲ್ಲಿ ಗವಿಯಪ್ಪ ಸೇರಿ ಹಲವು ಶಾಸಕರು ಗ್ಯಾರಂಟಿಗಳ ಬಗ್ಗೆ ಅಪಸ್ವರ ಎತ್ತುತ್ತಿದ್ದಾರೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

13 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

13 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

13 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

14 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

14 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

14 hours ago