ಗೋಕಾಕ, : ”ಐದು ರಾಜ್ಯಗಳಲ್ಲಿ ನಡೆಯುವ ಚುನಾವಣೆಯಲ್ಲಿ ನಾವು ಮೂರು ರಾಜ್ಯದಲ್ಲಿ ಗೆಲುವು ಸಾಧಿಸುತ್ತೇವೆ. ಆದರೆ ಕಾಂಗ್ರೆಸ್ ಒಂದು ರಾಜ್ಯವಾದರೂ ಗೆದ್ದು ತೋರಿಸಲಿ” ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣ್‌ದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸವಾಲೆಸೆದಿದ್ದಾರೆ.
ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿ ಪರವಾಗಿ ಪಟ್ಟಣದಲ್ಲಿ ಭಾನುವಾರ ರೋಡ್ ಶೋ ನಡೆಸಿ ಮಾತನಾಡಿದ ಸಂದರ್ಭ ನಳಿನ್ ಕುಮಾರ್ ಕಟೀಲ್ ಅವರು, ಉಪಚುನಾವಣೆಯ ಫಲಿತಾಂಶವು ಬಿಜೆಪಿ ಪತನಕ್ಕೆ ಮುನ್ನುಡಿಯಾಗುತ್ತೆ ಎಂಬ ರಣ್‌ದೀಪ್ ಸಿಂಗ್ ಸುರ್ಜೇವಾಲಾ ಅವರ ಹೇಳಿಗೆ ತಿರುಗೇಟು ನೀಡಿದರು.
”ಐದು ರಾಜ್ಯಗಳ ಪೈಕಿ ಬಿಜೆಪಿ ಮೂರು ರಾಜ್ಯದಲ್ಲಿ ಗೆಲುವು ಸಾಧಿಸಲಿದೆ. ಈ ಪೈಕಿ ಎರಡು ರಾಜ್ಯಗಳಲ್ಲಿ ಹೊಸದಾಗಿ ಖಾತೆ ತೆರೆಯಲಿದೆ. ನಾಶ ಯಾರು ಆಗ್ತಾರೆ ಗೊತ್ತಾಗುತ್ತೆ. ಕಾಂಗ್ರೆಸ್ ಒಂದು ರಾಜ್ಯವಾದರೂ ಗೆದ್ದು ತೋರಿಸಲಿ” ಎಂದು ಲೇವಡಿ ಮಾಡಿದರು.
ಮಂಗಳೂರು : ನೈಟ್ ಕರ್ಫ್ಯೂ ನಿಯಮ ಉಲ್ಲಂಘನೆ : 68 ವಾಹನಗಳ ಮೇಲೆ ಪ್ರಕರಣ ದಾಖಲು -Vishwanews24
”ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಬಣಗಳು ಕಾಂಗ್ರೆಸ್‌ನಲ್ಲಿದ್ದು ಈ ಎರಡು ಬಣಗಳು ತಮ್ಮ ವೈಯಕ್ತಿಕ ಪ್ರತಿಷ್ಠೆಗಾಗಿ ಜಗಳವಾಡಿ ತಮ್ಮ ಪಕ್ಷವನ್ನೇ ಅಧೋಗತಿಗೆ ತಂದಿದ್ದಾರೆ. ಕಾಂಗ್ರೆಸ್ ಪಕ್ಷ ಈಗ ಮೂರು ಭಾಗವಾಗಿದೆ” ಎಂದೂ ಹೇಳಿದರು.
”ಕಾಂಗ್ರೆಸ್ ಪಕ್ಷವೇ ಪ್ರಜಾಪ್ರಭುತ್ವ ಎಂಬ ಶಬ್ದಕ್ಕೆ ಹಾನಿ ಮಾಡಿದೆ” ಎಂದ ಅವರು, ”ಪಕ್ಷದಲ್ಲಿ ಪ್ರಭಾವಿಯಾಗಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರನ್ನು ತಮ್ಮ ರಾಜಕೀಯ ಬೇಳೆ ಬೆಯ್ಯಿಸಿಕೊಳ್ಳಲು ಡಿಕೆಶಿ ಚುನಾವಣಾ ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ. ಇನ್ನು ಸತೀಶ ಅವರ ರಾಜಕೀಯ ಜೀವನ ಕೊನೆಗೊಳಿಸಲು ಡಿಕೆಶಿ ನಡೆಸಿದ ಷಡ್ಯಂತ್ರ ಇದು” ಎಂದು ದೂರಿದರು.
ಜನರು ಸಹಕರಿಸದಿದ್ದರೆ ಲಾಕ್ ಡೌನ್ ಅನಿವಾರ್ಯ : ಸಿಎಂ BSY -Vishwanews24
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…
ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ ಸಂಭ್ರಮದ ನಡುವೆಯೇ…
ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ : ಅಕ್ಷಿತ್ ಸುವರ್ಣ ಮಂಗಳೂರು:…
ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…