ದಾವಣಗೆರೆ: ಐದು ವರ್ಷದ ಮಗಳನ್ನು ಸೊಂಟಕ್ಕೆ ಕಟ್ಟಿಕೊಂಡು ತಾಯಿ ಕೆರೆಗೆ ಹಾರಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಕವಿತಾ (27) ಹಾಗೂ ನಿಹಾರಿಕಾ (05) ಆತ್ಮಹತ್ಯೆ ಮಾಡಿಕೊಂಡ ತಾಯಿ-ಮಗಳು. ಮೃತ ಕವಿತಾ ಚನ್ನಗಿರಿ ತಾಲೂಕಿನ ಹೊನ್ನೆಬಾಗಿ ಗ್ರಾಮದ ನಿವಾಸಿ ಮಂಜುನಾಥ್ ಪತ್ನಿ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕೆರೆಬಿಳಚಿ ಬಳಿ ಇರುವ ಐತಿಹಾಸಿಕ ಪ್ರವಾಸಿ ತಾಣ ಸೂಳೆಕೆರೆಯಲ್ಲಿ ಈ ಘಟನೆ ನಡೆದಿದೆ.
ಕಳೆದ ಶುಕ್ರವಾರ ಮಗಳು ನಿಹಾರಿಕಾಳೊಂದಿಗೆ ಕವಿತಾ ಕಾಣೆಯಾಗಿದ್ದಳು. ಈ ಬಗ್ಗೆ ಪತಿ ಮಂಜುನಾಥ್ ಪೊಲೀಸರಿಗೆ ದೂರು ಕೊಟ್ಟಿದ್ದರು. ಇಂದು ಸೂಳೆಕೆರೆಯಲ್ಲಿ ತಾಯಿ-ಮಗಳ ಶವ ಪತ್ತೆಯಾಗಿದೆ. ಸೂಳೆಕೆರೆಗೆ ಹಾರುವ ಮುನ್ನ ಮಗಳನ್ನ ವೇಲ್ ನಿಂದ ಕಟ್ಟಿಕೊಂಡು ಕವಿತಾ ಕೆರೆಗೆ ಹಾರಿದ್ದಾರೆ.
ಮೂಲತಃ ಎರೇಹಳ್ಳಿಯ ನಿವಾಸಿಯಾದ ಕವಿತಾ ಅವರು ಆರು ವರ್ಷದ ಹಿಂದೆ ಹೊನ್ನೆಬಾಗಿ ಮಂಜುನಾಥ್‍ನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ದಂಪತಿಗೆ ಐದು ವರ್ಷದ ನಿಹಾರಿಕಾ ಎಂಬ ಓರ್ವ ಮಗಳಿದ್ದಳು. ಬಳಿಕ ವರದಕ್ಷಿಣೆ ಕಿರುಕಳ ಆರೋಪ ಕೇಳಿಬಂದಿತ್ತು.
ಕಳೆದ ಕೆಲ ವರ್ಷಗಳಿಂದ ಪತಿ ಹಾಗೂ ಅವರ ಮನೆಯವರು ನಿರಂತರ ವರದಕ್ಷಿಣೆ ಕಿರುಕಳ ನೀಡುತ್ತಿದ್ದರು. ಪತಿ ಹಾಗೂ ಪತಿ ಮನೆಯವರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕವಿತಾ ಕುಟುಂಬಸ್ಥರು ಆರೋಪಿಸಿದ್ದಾರೆ.
ಕವಿತಾಳ ಮನೆಯವರು ಪೊಲೀಸರಿಗೆ ದೂರು ನೀಡಿದ್ದು, ಈ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…