ಐಪಿಎಲ್ ಮತ್ತು ದೇಶಿ ಕ್ರಿಕೆಟ್ ವೃತ್ತಿ ಬದುಕಿಗೆ ನಿವೃತ್ತಿ ಘೋಷಿಸಿದ ಸುರೇಶ್ ರೈನಾ – Vishwanews24
ಐಪಿಎಲ್ ಮತ್ತು ದೇಶಿ ಕ್ರಿಕೆಟ್ ವೃತ್ತಿಬದುಕಿಗೆ ನಿವೃತ್ತಿ ಘೋಷಿಸಿದ ಸುರೇಶ್ ರೈನಾ
ಬೆಂಗಳೂರು: ಮಿಸ್ಟರ್ ಐಪಿಎಲ್ ಎಂದೇ ಖ್ಯಾತಿ ಗಿಟ್ಟಿಸಿದ್ದ ಟೀಮ್ ಇಂಡಿಯಾ ಮಾಜಿ ಆಲ್ರೌಂಡರ್ ಸುರೇಶ್ ರೈನಾ, ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್ ಸೇರಿದಂತೆ ಎಲ್ಲಾ ಮಾದರಿಯ ದೇಶಿ ಕ್ರಿಕೆಟ್ಗೆ ಮಂಗಳವಾರ ಅಧಿಕೃತವಾಗಿ ನಿವೃತ್ತಿ ಘೋಷಿಸಿದ್ದಾರೆ.
ಕೆಲ ದಿನಗಳಿಂದ ನೆಟ್ಸ್ನಲ್ಲಿ ಅಭ್ಯಾಸ ನಿರತರಾಗಿ ಕಮ್ಬ್ಯಾಕ್ ಮಾಡುವ ಸುಳಿವು ನೀಡಿದ್ದ ರೈನಾ, ಐಪಿಎಲ್ 2023 ಟೂರ್ನಿಯಲ್ಲಿ ಸ್ಪರ್ಧಾತ್ಮಕ ಕ್ರಿಕೆಟ್ಗೆ ಮರಳುತ್ತಾರೆ ಎಂದೇ ಅಭಿಮಾನಿಗಳು ಎದುರು ನೋಡುತ್ತಿದ್ದರು. ಆದರೆ, ಎಲ್ಲಾ ಮಾದರಿಯ ಕ್ರಿಕೆಟ್ಗೆ ರೈನಾ ವಿದಾಯ ಹೇಳಿರುವುದು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ.
2020ರಲ್ಲಿ ಎಂ.ಎಸ್ ಧೋನಿ ಆಗಸ್ಟ್ 15ರಂದು ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ ದಿನವೇ ಸುರೇಶ್ ರೈನಾ ಕೂಡ ಅಂತಾರಾಷ್ಟ್ರೀಯ ಕ್ರಿಕೆಟ್ ಕೆರಿಯರ್ಗೆ ಅಂತ್ಯ ಹಾಡಿದ್ದರು. ದೈನಿಕ್ ಜಾಗರಣ್ ಮಾಡಿರುವ ವರದಿ ಪ್ರಕಾರ ರೈನಾ, ಮುಂಬರುವ ಐಪಿಎಲ್ನಲ್ಲೂ ಆಡುವುದಿಲ್ಲ. ಐಪಿಎಲ್ 2022 ಟೂರ್ನಿ ಸಲುವಾಗಿ ನಡೆದ ಮೆಗಾ ಆಕ್ಷನ್ಗೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸುರೇಶ್ ರೈನಾ ಅವರನ್ನು ಬಿಡುಗಡೆ ಮಾಡಿತ್ತು. ಆದರೆ, ಹರಾಜಿನಲ್ಲಿ ಯಾವುದೇ ತಂಡ ರೈನಾ ಅವರನ್ನು ಖರೀದಿಸಲು ಮುಂದಾಗಿರಲಿಲ್ಲ. ಇನ್ನು ಕೊರೊನಾ ವೈರಸ್ ಕಾರಣ ರೈನಾ ಐಪಿಎಲ್ 2021 ಟೂರ್ನಿಯಿಂದ ಹೊರಗುಳಿದಿದ್ದರು.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಪುತ್ತೂರು ಮತ್ತು ಸುಳ್ಯದ 32 ಕಡೆ NIA ದಾಳಿ – Vishwanews24
