Featured

ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಸಾವಿನ ರಹಸ್ಯ ತನಿಖೆಗೆ ಪರಿಣಿತರ ಸಮಿತಿ ರಚನೆ -Vishwanews24

ಬೆಂಗಳೂರು: ದಕ್ಷ, ಪ್ರಮಾಣಿಕ ಅಧಿಕಾರಿ ಮಧುಕರ್ ಶೆಟ್ಟಿ ಸಾವಿನ ಬಗ್ಗೆ ಹಲವಾರು ಮಂದಿ ಅನುಮಾನ ವ್ಯಕ್ತಪಡಿಸಿರುವ ಹಿನ್ನಲೆಯಲ್ಲಿ, ಮಧುಕರ ಶೆಟ್ಟಿ ಅವರ ಸಾವಿನ ಬಗ್ಗೆ ಇರುವ ಅನುಮಾನ ನಿವಾರಿಸಲು ರಾಜ್ಯ ಸರಕಾರ ಪರಿಣಿತ ವೈದ್ಯರ ಸಮಿತಿ ರಚಿಸಿ ತನಿಖೆ ನಡೆಸಿ ಸರಕಾರಕ್ಕೆ ವರದಿ ಸಲ್ಲಿಸಲು ತಿಳಿಸಿದೆ.

ಈ ತನಿಖಾ ಸಮಿತಿಯಲ್ಲಿ ಪ್ರಮುಖ ವೈದ್ಯರ ತಂಡವಿದ್ದು ನಾರಾಯಣ ಹೃದಯಾಲಯದ ಡಾ. ದೇವಿಪ್ರಸಾದ್‌ ಶೆಟ್ಟಿ ಅವರನ್ನು ಅಧ್ಯಕ್ಷರನ್ನಾಗಿಸಿದ್ದು, ಉಳಿದಂತೆ ಸದಸ್ಯರನ್ನಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕರು, ಜಯದೇವ ಹೃದ್ರೋಗ ವಿಜ್ಞಾನ ಹಾಗೂ ಸಂಶೋಧನಾ ಸಂಸ್ಥೆಯ ಕಾರ್ಡಿಯೋಥೊರಾಸಿಕ್‌ ಸರ್ಜರಿ ವಿಭಾಗದ ಡಾ. ಸೀತಾರಾಮ್‌ ಭಟ್, ನಿಮ್ಹಾನ್ಸ್‌ನ ವೈರಾಲಜಿ ವಿಭಾಗದ ಮುಖ್ಯಸ್ಥರಾದ ಡಾ. ವಿ. ರವಿ, ರಾಜೀವ್‌ ಗಾಂಧಿ ಎದೆರೋಗಗಳ ಸಂಸ್ಥೆಯ ಎದೆರೋಗ ವಿಭಾಗದ ಡಾ. ನಾಗರಾಜ ಅವರನ್ನು ನೇಮಕ ಮಾಡಲಾಗಿದೆ. ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕರನ್ನು ಸಂಚಾಲಕರನ್ನಾಗಿ ನೇಮಿಸಿದ್ದು, ಎರಡು ವಾರಗಳಲ್ಲಿ ವರದಿ ನೀಡುವಂತೆ ಆದೇಶದಲ್ಲಿ ತಿಳಿಸಿದೆ.

ಹೈದ್ರಾಬಾದ್‌ನ ಸರ್ದಾರ್‌ ವಲ್ಲಭಭಾಯ್‌ ಪಟೇಲ್ ರಾಷ್ಟ್ರೀಯ ಪೊಲೀಸ್‌ ಅಕಾಡೆಮಿಯ ಉಪ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಮಧುಕರ್‌ ಶೆಟ್ಟಿ ಅವರಿಗೆ ದಿಢೀರ್ ಕಾಣಿಸಿಕೊಂಡ ಅನಾರೋಗ್ಯದಿಂದ ಹೈದ್ರಾಬಾದಿನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ಡಿ.25ರಂದು ಚಿಕಿತ್ಸೆ ಫ‌ಲಿಸದೆ ಸಾವನ್ನಪ್ಪಿದ್ದರು. ಭ್ರಷ್ಟರ ಪಾಲಿಗೆ ಸಿಂಹಸ್ವಪ್ನ ಆಗಿದ್ದ ಖಡಕ್​​ ಅಧಿಕಾರಿ ಸಾವಿನ ಸುತ್ತ ಹಲವಾರು ಅನುಮಾನ ಹುಟ್ಟುಹಾಕಿಕೊಂಡಿತ್ತು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago