ಮಂಗಳೂರು: ನಗರದಲ್ಲಿ ನಡೆಸಿದ ಪ್ರತಿಭಟನೆಯ ವೇಳೆ ರಾಜ್ಯಪಾಲರನ್ನು ಬಾಂಗ್ಲಾ ದೇಶದ ಮಾದರಿಯಲ್ಲಿ ರಾಜ್ಯದಿಂದ ಓಡಿಸುತ್ತೇವೆ ಎಂಬ ಹೇಳಿಕೆ ನೀಡಿ, ಅರಾಜಕತೆ ಸೃಷ್ಟಿಸಲು ಯತ್ನಿಸಿರುವ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಒತ್ತಾಯಿಸಿದೆ.
ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಘಟಕದ ಉಪಾಧ್ಯಕ್ಷ ಜೋಯಲ್ ಮೆಂಡೋನ್ಸಾ, ‘ನಾಲಿಗೆಯ ಮೇಲೆ ಹಿಡಿತ ಇಲ್ಲದೆ ಮಾತನಾಡುವ ಐವನ್ ಅವರನ್ನು ವಿಧಾನ ಪರಿಷತ್ ಸ್ಥಾನದಿಂದ ಬಿಡುಗಡೆಗೊಳಿಸಬೇಕು. ಅರಾಜಕತೆ ಸೃಷ್ಟಿಸುವ ಕಾಂಗ್ರೆಸ್ ಯತ್ನ ಐವನ್ ಮೂಲಕ ಬಯಲಾಗಿದೆ. ಅವರನ್ನು ಬಂಧಿಸದಿದ್ದರೆ ಅವರ ಮನೆಗೆ ಮುತ್ತಿಗೆ ಹಾಕಲಾಗುವುದು’ ಎಂದರು.
ಕಾಂಗ್ರೆಸ್ ಪ್ರತಿಭಟನೆ ವೇಳೆ ಕಲ್ಲು ತೂರಾಟ ನಡೆಸಿದ ಮೂವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಆದರೆ, ಇದಕ್ಕೆ ಪ್ರಚೋದನೆ ನೀಡಿದ ಐವನ್ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸದೆ ಪೊಲೀಸ್ ಇಲಾಖೆ ತಾರತಮ್ಯ ತೋರಿದೆ. ಅಲ್ಪಸಂಖ್ಯಾತರ ರಕ್ಷಣೆಯ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್, ಪ್ರತಿಭಟನೆ ವೇಳೆ ಅಲ್ಪಸಂಖ್ಯಾತ ವ್ಯಕ್ತಿಗೆ ಸೇರಿದ ಬಸ್ ಮೇಲೆ ಕಲ್ಲು ತೂರಾಟ ನಡೆಸಲು ಪ್ರೇರಣೆ ನೀಡಿದೆ ಎಂದು ಆರೋಪಿಸಿದರು.
ಬಿಜೆಪಿ ಪ್ರಮುಖರಾದ ಟಿ.ಎ. ಶನವಾಜ್, ಅರುಣ್ ಶೇಟ್, ಜೆಸ್ಸೆಲ್ ಡಿಸೋಜ, ಫ್ರೆಡ್ರಿಕ್ ಪೌಲ್, ಸಿರಾಜ್ ಮುಡಿಪು, ಎ.ಕೆ. ಜಮಾಲ್, ವಿಲ್ಫ್ರೆಡ್ ಸಲ್ಡಾನ, ಟೀನಾ ಇದ್ದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…