Featured

ಐಶ್ವರ್ಯಗೌಡ  ವಂಚನೆ ಪ್ರಕರಣ : ಡಿ.ಕೆ.ಸುರೇಶ್‌ಗೆ ED ಸಮನ್ಸ್ – vishwanews24

ಐಶ್ವರ್ಯಗೌಡ  ವಂಚನೆ ಪ್ರಕರಣ : ಡಿ.ಕೆ.ಸುರೇಶ್‌ಗೆ ED ಸಮನ್ಸ್

ಬೆಂಗಳೂರು: ಐಶ್ವರ್ಯಗೌಡ  ವಂಚನೆ ಪ್ರಕರಣದಲ್ಲಿ ಮಾಜಿ ಸಂಸದ ಡಿ.ಕೆ.ಸುರೇಶ್  ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಕೊಟ್ಟಿದೆ.

ಐಶ್ವರ್ಯಗೌಡ ಕೇಸ್‌ನಲ್ಲಿ ಈಗಾಗಲೇ ಶಾಸಕ ವಿನಯ್ ಕುಲಕರ್ಣಿ ಸಂಕಷ್ಟ ಎದುರಿಸುತ್ತಿದ್ದಾರೆ. ಅವರ ಬೆನ್ನಲ್ಲೇ ಕಾಂಗ್ರೆಸ್ ನಾಯಕ ಡಿ.ಕೆ.ಸುರೇಶ್‌ಗೆ ಇ.ಡಿ ಶಾಕ್ ಕೊಟ್ಟಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಡಿಕೆ ಸುರೇಶ್, ಮಧ್ಯಾಹ್ನ 12-30 ಗಂಟೆಗೆ ಇ.ಡಿಯವರು ಬಂದು ಸಮನ್ಸ್ ನೀಡಿದ್ದಾರೆ. ನಾನು ಹೊರಗೆ ಹೋಗಿದ್ದೆ ಇಡಿಯವರು ಬಂದಿದ್ದಾರೆ ಎಂದು ಗೊತ್ತಾದ ಮೇಲೆ ಬಂದೆ. ಅವರು ಸಮನ್ಸ್ ಕೊಟ್ಟಿದ್ದಾರೆ. ಸಮನ್ಸ್ನಲ್ಲಿ ಯಾವ ಪ್ರಕರಣ ಅಂತ ಇಲ್ಲ. ಆದರೆ, ದಾಖಲಾತಿ ನೋಡಿದಾಗ ಈ ಪ್ರಕರಣ ಅಂತ ಗೊತ್ತಾಯ್ತು ಎಂದು ತಿಳಿಸಿದ್ದಾರೆ.

 

ಗುರುವಾರ ಬನ್ನಿ ಅಂದಿದ್ದಾರೆ. ಆದರೆ ಪೂರ್ವ ನಿಯೋಜಿತ ಕಾರ್ಯಕ್ರಮ ಇದೆ. ಅದಕ್ಕೆ ಸೋಮವಾರ ಬರುತ್ತೇನೆ ಎಂದು ಮೌಕಿಕವಾಗಿ ತಿಳಿಸಿದ್ದೇನೆ. ಈಗ ಇ-ಮೇಲ್ ಮೂಲಕ ಅಧಿಕೃತವಾಗಿ ತಿಳಿಸುತ್ತಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.

ನಾನು ಯಾವುದೇ ವ್ಯವಹಾರ ನಡೆಸಿಲ್ಲ. ಅವರು (ಐಶ್ವರ್ಯಗೌಡ) ನಮ್ಮ ಕ್ಷೇತ್ರದವರು ಒಂದೆರಡು ಕಾರ್ಯಕ್ರಮಕ್ಕೆ ಹೋಗಿದ್ದೆ. ನನ್ನ ತಂಗಿ ಅಂತಾ ಹೇಳಿಕೊಂಡು ಒಡಾಡುವುದರ ಬಗ್ಗೆ ನಾನೇ ದೂರು ಕೊಟ್ಟಿದ್ದೇನೆ. ಇ.ಡಿಯವರು 7-8 ದಾಖಲೆಗಳನ್ನು ಕೇಳಿದ್ದಾರೆ. ನನ್ನ ಬಳಿ ದಾಖಲೆ ಕೇಳಿದ್ದು ಅಸಂಬದ್ಧ. ಇ.ಡಿ ವಿಚಾರಣೆಗೆ ಹೋದಾಗ ಅಲ್ಲಿ ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago