Featured

ಐಸಿಐಸಿಐ ಬ್ಯಾಂಕ್‌ ಸಾಲ ವಂಚನೆ ಪ್ರಕರಣ : ವಿಡಿಯೊಕಾನ್ ಗ್ರೂಪ್ ಅಧ್ಯಕ್ಷ ವೇಣುಗೋಪಾಲ್ ಧೂತ್  ಬಂಧನ – Vishwanews24

ಐಸಿಐಸಿಐ ಬ್ಯಾಂಕ್‌ ಸಾಲ ವಂಚನೆ ಪ್ರಕರಣ : ವಿಡಿಯೊಕಾನ್ ಗ್ರೂಪ್ ಅಧ್ಯಕ್ಷ ವೇಣುಗೋಪಾಲ್ ಧೂತ್  ಬಂಧನ

ಮುಂಬೈ: ಐಸಿಐಸಿಐ ಬ್ಯಾಂಕ್‌ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೊಕಾನ್ ಗ್ರೂಪ್ ಅಧ್ಯಕ್ಷ ವೇಣುಗೋಪಾಲ್ ಧೂತ್ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಎಎನ್‌ಐ ಟ್ವೀಟಿಸಿದೆ.

ಇತ್ತೀಚೆಗೆ, ಐಸಿಐಸಿಐ ಬ್ಯಾಂಕ್‌ನ ಮಾಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಮತ್ತು ವ್ಯವಸ್ಥಾಪಕ ನಿರ್ದೇಶಕಿ ಚಂದಾ ಕೊಚ್ಚರ್‌, ಅವರ ಗಂಡ ದೀಪಕ್‌ ಕೊಚ್ಚರ್‌ ಅವರನ್ನು ಸಿಬಿಐ ಬಂಧಿಸಿತ್ತು. ಬಳಿಕ ಮುಂಬೈನ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿ 3 ದಿನಗಳ ಕಸ್ಟಡಿಗೆ ಪಡೆದಿತ್ತು. ಇದಾದ ಎರಡೇ ದಿನಗಳಲ್ಲಿ ಸಿಬಿಐ ವೇಣುಗೋಪಾಲ್ ಅವರನ್ನು ಬಂಧಿಸಿದೆ.

ಐಸಿಐಸಿಐ ಬ್ಯಾಂಕ್‌ನ ಕ್ರೆಡಿಟ್ ಪಾಲಿಸಿ, ಆರ್‌ಬಿಐ ಮಾರ್ಗಸೂಚಿ ಮತ್ತು ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿ ವಿಡಿಯೊಕಾನ್ ಗ್ರೂಪ್‌ನ ಕಂಪನಿಗಳಿಗೆ ₹3,250 ಕೋಟಿ ಸಾಲ ಮಂಜೂರು ಮಾಡಲಾಗಿದೆ ಎಂಬುದು ಸಿಬಿಐ ಆರೋಪವಾಗಿದೆ.

ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಗೆ ಸಂಬಂಧಿಸಿದ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಚಂದಾ ಕೊಚ್ಚರ್, ಅವರ ಪತಿ ದೀಪಕ್ ಕೊಚ್ಚರ್ ಮತ್ತು ವಿಡಿಯೊಕಾನ್ ಗ್ರೂಪ್‌ನ ವೇಣುಗೋಪಾಲ್ ಧೂತ್, ನ್ಯೂಪವರ್ ರಿನ್ಯೂವಬಲ್ಸ್, ಸುಪ್ರೀಂ ಎನರ್ಜಿ, ವಿಡಿಯೋಕಾನ್ ಇಂಟರ್‌ನ್ಯಾಶನಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮತ್ತು ವಿಡಿಯೋಕಾನ್ ಇಂಡಸ್ಟ್ರೀಸ್ ಲಿಮಿಟೆಡ್ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿತ್ತು.
ವಿಡಿಯೊಕಾನ್ ಗ್ರೂಪ್, ಐಸಿಐಸಿಐ ಬ್ಯಾಂಕ್‌ನಿಂದ ₹ 3,250 ಕೋಟಿ ಸಾಲ ಪಡೆದ ಕೆಲ ತಿಂಗಳ ನಂತರ ವಿಡಿಯೊಕಾನ್ ಪ್ರವರ್ತಕ ವೇಣುಗೋಪಾಲ್, ನ್ಯೂಪವರ್‌ನಲ್ಲಿ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಿದ್ದರು.

ಆರೋಪಿಯು(ಚಂದಾ ಕೊಚ್ಚರ್) ಐಸಿಐಸಿಐ ಬ್ಯಾಂಕ್‌ಗೆ ವಂಚನೆ ಮಾಡುವ ದೃಷ್ಟಿಯಿಂದ ಇತರರ ಜೊತೆ ಸೇರಿಕೊಂಡು ಖಾಸಗಿ ಕಂಪನಿಗೆ ಸಾಲವನ್ನು ಮಂಜೂರು ಮಾಡಿದ್ದಾರೆ ಎಂಬುದು ಸಿಬಿಐ ಆರೋಪವಾಗಿದೆ.

ಪ್ರಕರಣ ಕುರಿತಂತೆ 2019ರಲ್ಲಿ ಸಿಬಿಐ ಎಫ್‌ಐಆರ್ ದಾಖಲಿಸಿತ್ತು.

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

2 hours ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

3 hours ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

3 hours ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

3 hours ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

3 hours ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

3 hours ago