ಮುಂಬೈ: ಐಸಿಐಸಿಐ ಬ್ಯಾಂಕ್ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೊಕಾನ್ ಗ್ರೂಪ್ ಅಧ್ಯಕ್ಷ ವೇಣುಗೋಪಾಲ್ ಧೂತ್ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಎಎನ್‌ಐ ಟ್ವೀಟಿಸಿದೆ.
ಇತ್ತೀಚೆಗೆ, ಐಸಿಐಸಿಐ ಬ್ಯಾಂಕ್‌ನ ಮಾಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಮತ್ತು ವ್ಯವಸ್ಥಾಪಕ ನಿರ್ದೇಶಕಿ ಚಂದಾ ಕೊಚ್ಚರ್, ಅವರ ಗಂಡ ದೀಪಕ್ ಕೊಚ್ಚರ್ ಅವರನ್ನು ಸಿಬಿಐ ಬಂಧಿಸಿತ್ತು. ಬಳಿಕ ಮುಂಬೈನ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿ 3 ದಿನಗಳ ಕಸ್ಟಡಿಗೆ ಪಡೆದಿತ್ತು. ಇದಾದ ಎರಡೇ ದಿನಗಳಲ್ಲಿ ಸಿಬಿಐ ವೇಣುಗೋಪಾಲ್ ಅವರನ್ನು ಬಂಧಿಸಿದೆ.
ಐಸಿಐಸಿಐ ಬ್ಯಾಂಕ್‌ನ ಕ್ರೆಡಿಟ್ ಪಾಲಿಸಿ, ಆರ್‌ಬಿಐ ಮಾರ್ಗಸೂಚಿ ಮತ್ತು ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿ ವಿಡಿಯೊಕಾನ್ ಗ್ರೂಪ್‌ನ ಕಂಪನಿಗಳಿಗೆ ₹3,250 ಕೋಟಿ ಸಾಲ ಮಂಜೂರು ಮಾಡಲಾಗಿದೆ ಎಂಬುದು ಸಿಬಿಐ ಆರೋಪವಾಗಿದೆ.
ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಗೆ ಸಂಬಂಧಿಸಿದ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಚಂದಾ ಕೊಚ್ಚರ್, ಅವರ ಪತಿ ದೀಪಕ್ ಕೊಚ್ಚರ್ ಮತ್ತು ವಿಡಿಯೊಕಾನ್ ಗ್ರೂಪ್‌ನ ವೇಣುಗೋಪಾಲ್ ಧೂತ್, ನ್ಯೂಪವರ್ ರಿನ್ಯೂವಬಲ್ಸ್, ಸುಪ್ರೀಂ ಎನರ್ಜಿ, ವಿಡಿಯೋಕಾನ್ ಇಂಟರ್‌ನ್ಯಾಶನಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮತ್ತು ವಿಡಿಯೋಕಾನ್ ಇಂಡಸ್ಟ್ರೀಸ್ ಲಿಮಿಟೆಡ್ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿತ್ತು.
ವಿಡಿಯೊಕಾನ್ ಗ್ರೂಪ್, ಐಸಿಐಸಿಐ ಬ್ಯಾಂಕ್‌ನಿಂದ ₹ 3,250 ಕೋಟಿ ಸಾಲ ಪಡೆದ ಕೆಲ ತಿಂಗಳ ನಂತರ ವಿಡಿಯೊಕಾನ್ ಪ್ರವರ್ತಕ ವೇಣುಗೋಪಾಲ್, ನ್ಯೂಪವರ್‌ನಲ್ಲಿ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಿದ್ದರು.
ಆರೋಪಿಯು(ಚಂದಾ ಕೊಚ್ಚರ್) ಐಸಿಐಸಿಐ ಬ್ಯಾಂಕ್‌ಗೆ ವಂಚನೆ ಮಾಡುವ ದೃಷ್ಟಿಯಿಂದ ಇತರರ ಜೊತೆ ಸೇರಿಕೊಂಡು ಖಾಸಗಿ ಕಂಪನಿಗೆ ಸಾಲವನ್ನು ಮಂಜೂರು ಮಾಡಿದ್ದಾರೆ ಎಂಬುದು ಸಿಬಿಐ ಆರೋಪವಾಗಿದೆ.
ಪ್ರಕರಣ ಕುರಿತಂತೆ 2019ರಲ್ಲಿ ಸಿಬಿಐ ಎಫ್‌ಐಆರ್ ದಾಖಲಿಸಿತ್ತು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…