ದುಬೈ: ಟೀಂ ಇಂಡಿಯಾದ ಆಲ್‍ರೌಂಡರ್ ರವೀಂದ್ರ ಜಡೇಜಾ ಐಸಿಸಿಯ ನೂತನ ಟೆಸ್ಟ್ ಆಲ್‍ರೌಂಡರ್ ರ‍್ಯಾಂಕಿಂಗ್‌ನಲ್ಲಿ ನಂಬರ್ 1 ಸ್ಥಾನಕ್ಕೇರಿದ್ದಾರೆ.
ಇಂದು ಐಸಿಸಿ ಬಿಡುಗಡೆ ಮಾಡಿರುವ ನೂತನ ಟೆಸ್ಟ್ ರ‍್ಯಾಂಕಿಂಗ್‌ನ ಆಲ್‍ರೌಂಡರ್ ವಿಭಾಗದಲ್ಲಿ ಜಡೇಜಾ 406 ಅಂಗಳೊಂದಿಗೆ ನಂಬರ್ 1 ಸ್ಥಾನ ಪಡೆದಿದ್ದಾರೆ. ಜಡೇಜಾ ಬಳಿಕ ಜೇಸನ್ ಹೋಲ್ಡರ್ ಇದ್ದು, 382 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಜಡೇಜಾ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ಪರ ಬ್ಯಾಟಿಂಗ್‍ನಲ್ಲಿ 175 ರನ್ ಮತ್ತು ಬೌಲಿಂಗ್‍ನಲ್ಲಿ 9 ವಿಕೆಟ್ ಕಿತ್ತು ಮಿಂಚಿದ್ದರು. ಈ ಭರ್ಜರಿ ಪ್ರದರ್ಶನದ ಬಳಿಕ ರ‍್ಯಾಂಕಿಂಗ್‌ನಲ್ಲಿ ಏರಿಕೆ ಕಂಡು ನಂಬರ್ 1 ಸ್ಥಾನಕ್ಕೇರಿದ್ದಾರೆ. ಈ ಹಿಂದೆ ಜೇಸನ್ ಹೋಲ್ಡರ್ 2021ರ ಫೆಬ್ರವರಿ ಬಳಿಕ ಆಲ್‍ರೌಂಡರ್ ಪಟ್ಟಿಯಲ್ಲಿ ನಂಬರ್ 1 ಸ್ಥಾನದಲ್ಲಿದ್ದರು. ಇದೀಗ ಜಡೇಜಾ ನಂಬರ್ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…