Featured

ಐಸಿಸ್ ಜೊತೆ ಸಂಪರ್ಕ ಆರೋಪ :  19 ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿ ಅರೆಸ್ಟ್ – vishwanews24

ಐಸಿಸ್ ಜೊತೆ ಸಂಪರ್ಕ ಆರೋಪ :  19 ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿ ಅರೆಸ್ಟ್

ಲಕ್ನೋ : ಐಸಿಸ್ ಆನ್‌ಲೈನ್ ಮಾಡ್ಯೂಲ್ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇರೆಗೆ 19 ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ.

ಸಹರಾನ್‌ಪುರ ಜಿಲ್ಲೆಯ ನಿವಾಸಿ ಹರಿಶ್ ಅಲಿ ಬಂಧಿತ ಆರೋಪಿ. ಈತ ನಿಷೇಧಿತ ಭಯೋತ್ಪಾದಕ ಸಂಘಟನೆ ಐಸಿಸ್‌ನ ಆನ್‌ಲೈನ್ ಮಾಡ್ಯೂಲ್‌ನೊಂದಿಗೆ ಸಂಪರ್ಕ ಹೊಂದಿದ್ದ. ಹೀಗಾಗಿ ಮೊರಾದಾಬಾದ್‌ನಲ್ಲಿ ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಈತನನ್ನು ಬಂಧಿಸಿದೆ.

ಇದನ್ನೂ ಓದಿ:

ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಐಸಿಸ್ ಸಂಬಂಧಿತ ಆನ್‌ಲೈನ್ ನೆಟ್‌ವರ್ಕ್‌ಗಳ ಚಟುವಟಿಕೆಗಳ ಕುರಿತು ನಡೆಯುತ್ತಿರುವ ತನಿಖೆಯ ವೇಳೆ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯು ಎರಡನೇ ವರ್ಷದ ಬಿಡಿಎಸ್ ವಿದ್ಯಾರ್ಥಿಯಾಗಿದ್ದು, ಇನ್‌ಸ್ಟಾಗ್ರಾಮ್‌ನಂತಹ ಸಾಮಾಜಿಕ ಮಾಧ್ಯಮ ವೇದಿಕೆಗಳು, ಡಿಸ್ಕಾರ್ಡ್ನಂತಹ ಎನ್‌ಕ್ರಿಪ್ಟ್ ಮಾಡಿದ ಅಪ್ಲಿಕೇಶನ್‌ಗಳ ಮೂಲಕ ಐಸಿಸ್ ನಿರ್ವಾಹಕರ ಜೊತೆ ಸಂಪರ್ಕ ಹೊಂದಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಉತ್ತರ ಪ್ರದೇಶ ಮತ್ತು ದೇಶದ ಇತರ ಭಾಗಗಳಲ್ಲಿ ಕೆಲವರು ಷರಿಯಾ ಆಧಾರಿತ ಖಲೀಫತ್ ವ್ಯವಸ್ಥೆಯನ್ನು ಸ್ಥಾಪಿಸುವ ಗುರಿ ಹೊಂದಿರುವ ಐಸಿಸ್ ಸಿದ್ಧಾಂತವನ್ನು ಪ್ರಚಾರ ಮಾಡಲು ಆನ್‌ಲೈನ್ ಗ್ರೂಪ್‌ಗಳನ್ನು ರಚಿಸುತ್ತಿದ್ದಾರೆ. ಭಾರತದಲ್ಲಿ ಭಯೋತ್ಪಾದಕ ಸಂಘಟನೆಯನ್ನು ಬಲಪಡಿಸಲು ಜನರನ್ನು ನೇಮಿಸಿಕೊಳ್ಳುತ್ತಿದ್ದಾರೆ ಎಂದು ಗುಪ್ತಚರ ಮಾಹಿತಿಗಳು ಎಚ್ಚರಿಕೆ ನೀಡಿವೆ.

ಇದನ್ನೂ ಓದಿ:

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

13 hours ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

13 hours ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

13 hours ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

14 hours ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

14 hours ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

14 hours ago