ಲಕ್ನೋ : ಐಸಿಸ್ ಆನ್‌ಲೈನ್ ಮಾಡ್ಯೂಲ್ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇರೆಗೆ 19 ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ.
ಸಹರಾನ್‌ಪುರ ಜಿಲ್ಲೆಯ ನಿವಾಸಿ ಹರಿಶ್ ಅಲಿ ಬಂಧಿತ ಆರೋಪಿ. ಈತ ನಿಷೇಧಿತ ಭಯೋತ್ಪಾದಕ ಸಂಘಟನೆ ಐಸಿಸ್‌ನ ಆನ್‌ಲೈನ್ ಮಾಡ್ಯೂಲ್‌ನೊಂದಿಗೆ ಸಂಪರ್ಕ ಹೊಂದಿದ್ದ. ಹೀಗಾಗಿ ಮೊರಾದಾಬಾದ್‌ನಲ್ಲಿ ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಈತನನ್ನು ಬಂಧಿಸಿದೆ.
ಇದನ್ನೂ ಓದಿ:
ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಐಸಿಸ್ ಸಂಬಂಧಿತ ಆನ್‌ಲೈನ್ ನೆಟ್‌ವರ್ಕ್‌ಗಳ ಚಟುವಟಿಕೆಗಳ ಕುರಿತು ನಡೆಯುತ್ತಿರುವ ತನಿಖೆಯ ವೇಳೆ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯು ಎರಡನೇ ವರ್ಷದ ಬಿಡಿಎಸ್ ವಿದ್ಯಾರ್ಥಿಯಾಗಿದ್ದು, ಇನ್‌ಸ್ಟಾಗ್ರಾಮ್‌ನಂತಹ ಸಾಮಾಜಿಕ ಮಾಧ್ಯಮ ವೇದಿಕೆಗಳು, ಡಿಸ್ಕಾರ್ಡ್ನಂತಹ ಎನ್‌ಕ್ರಿಪ್ಟ್ ಮಾಡಿದ ಅಪ್ಲಿಕೇಶನ್‌ಗಳ ಮೂಲಕ ಐಸಿಸ್ ನಿರ್ವಾಹಕರ ಜೊತೆ ಸಂಪರ್ಕ ಹೊಂದಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಉತ್ತರ ಪ್ರದೇಶ ಮತ್ತು ದೇಶದ ಇತರ ಭಾಗಗಳಲ್ಲಿ ಕೆಲವರು ಷರಿಯಾ ಆಧಾರಿತ ಖಲೀಫತ್ ವ್ಯವಸ್ಥೆಯನ್ನು ಸ್ಥಾಪಿಸುವ ಗುರಿ ಹೊಂದಿರುವ ಐಸಿಸ್ ಸಿದ್ಧಾಂತವನ್ನು ಪ್ರಚಾರ ಮಾಡಲು ಆನ್‌ಲೈನ್ ಗ್ರೂಪ್‌ಗಳನ್ನು ರಚಿಸುತ್ತಿದ್ದಾರೆ. ಭಾರತದಲ್ಲಿ ಭಯೋತ್ಪಾದಕ ಸಂಘಟನೆಯನ್ನು ಬಲಪಡಿಸಲು ಜನರನ್ನು ನೇಮಿಸಿಕೊಳ್ಳುತ್ತಿದ್ದಾರೆ ಎಂದು ಗುಪ್ತಚರ ಮಾಹಿತಿಗಳು ಎಚ್ಚರಿಕೆ ನೀಡಿವೆ.
ಇದನ್ನೂ ಓದಿ:
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…