ಒಂದು ಕನಸಿನಂತೆ ಈ ಕನಸು ನಿಜವಾಗಿದೆ ;ನಿಶ್ಚಿತಾರ್ಥ ಖಚಿತಪಡಿಸಿದ ನಟಿ ಅದಿತಿ ಪ್ರಭುದೇವ – Vishwanews24
ಒಂದು ಕನಸಿನಂತೆ ಈ ಕನಸು ನಿಜವಾಗಿದೆ ;ನಿಶ್ಚಿತಾರ್ಥ ಖಚಿತಪಡಿಸಿದ ನಟಿ ಅದಿತಿ ಪ್ರಭುದೇವ – Vishwanews24
ಬೆಂಗಳೂರು: ಚಂದನವನದ ಬೇಡಿಕೆಯ ನಟಿ ಅದಿತಿ ಪ್ರಭುದೇವ ಅವರು ನಿಶ್ಚಿತಾರ್ಥ ಮಾಡಿಕೊಂಡಿರುವ ಬಗ್ಗೆ ಖಚಿತಪಡಿಸಿದ್ದಾರೆ.
ಸೋಮವಾರ ಅವರು ನಿಶ್ಚಿತಾರ್ಥ ಮಾಡಿಕೊಂಡಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳು ಹರಿದಾಡಿದ್ದವು. ಇನ್‌ಸ್ಟಾಗ್ರಾಂನಲ್ಲಿ ನಿಶ್ಚಿತಾರ್ಥದ ವಿಷಯವನ್ನು ಖಚಿತಪಡಿಸಿದ್ದಾರೆ.
ಇನ್‌ಸ್ಟಾಗ್ರಾಂನಲ್ಲಿ ದಾವಣಗೆರೆ ಮೂಲದ ಹುಡುಗನೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿರುವ ಫೋಟೊವನ್ನು ಹಂಚಿಕೊಂಡಿದ್ದಾರೆ. ಅದರ ಜತೆಯಲ್ಲಿ ‘ಒಂದು ಕನಸಿನಂತೆ ಈ ಕನಸು ನಿಜವಾಗಿದೆ’ ಎಂದು ಬರೆದಿದ್ದಾರೆ. ಹಾಗೆ ಹ್ಯಾಶ್‌ಟ್ಯಾಗ್ ಹಾಕಿ ಎಂಗೆಜ್ಡ್ ಎಂದು ಬರೆದುಕೊಂಡಿದ್ದಾರೆ.
ಸದ್ಯ ದಾವಣಗೆರೆ ಮೂಲದ ಅದಿತಿ ತನ್ನ ಭಾವಿ ಪತಿಯೊಂದಿಗಿನ ಫೋಟೋವನ್ನು ಹಂಚಿಕೊಳ್ಳುವ ಮೂಲಕ ತಾನು ಮದುವೆಯಾಗುತ್ತಿರುವ ವಿಚಾರವನ್ನು ರಿವೀಲ್ ಮಾಡಿದ್ದಾರೆ.
ಇತ್ತೀಚೆಗಷ್ಟೇ ಎರಡೂ ಕುಟುಂಬಗಳು ತಾಂಬೂಲ ಬದಲಾಯಿಸಿಕೊಂಡಿದ್ದು, ವಿವಾಹದ ನಿಶ್ಚಿತಾರ್ಥವಾಗಿದೆ.
ಸೋಮವಾರಪೇಟೆಯ ಕಾಫಿ ಬೆಳೆಗಾರ ಪಿ.ಡಿ.ಚಂದ್ರಕಾಂತ್ ಹಾಗೂ ಸುಚರಿತ ದಂಪತಿಗಳ ಪುತ್ರ ಯಶಸ್ವಿಯನ್ನು ಅದಿತಿ ವರಿಸಲಿದ್ದಾರೆ.
