Featured

ಒಂದು ತಿಂಗಳಲ್ಲೇ ಶತ ಕೋಟಿ ಗಳಿಸುವ ಮೂಲಕ ಆದಾಯದಲ್ಲಿ ದಾಖಲೆ ಬರೆದ ತಿರುಪತಿ ತಿಮ್ಮಪ್ಪ -Vishwanews24

ಹೈದರಾಬಾದ್: ಆಂಧ್ರ ಪ್ರದೇಶದ ತಿರುಪತಿ ತಿಮ್ಮಪ್ಪ ಒಂದು ತಿಂಗಳಲ್ಲೇ ಶತ ಕೋಟಿ ಗಳಿಸುವ ಮೂಲಕ ಆದಾಯದಲ್ಲೂ ದಾಖಲೆ ಬರೆದಿದ್ದಾನೆ.

ತಿರುಪತಿ ತಿಮ್ಮಪ್ಪನ ಹುಂಡಿಗೆ 2019 ರ ಜೂನ್ ತಿಂಗಳಲ್ಲಿ 100 ಕೋಟಿಗೂ ಹೆಚ್ಚು ಆದಾಯ ಹರಿದುಬಂದಿದೆ. ಜೂನ್ ತಿಂಗಳ ಅಂಕಿ ಅಂಶಗಳಿಗೆ ಹೋಲಿಸಿದರೆ 2019 ಜೂನ್ ತಿಂಗಳಲ್ಲಿ ಲಡ್ಡು ವಿತರಣೆ, ಅನ್ನ ಪ್ರಸಾದ ವಿತರಣೆ, ಮುಡಿ ಕೊಟ್ಟವರ ಸಂಖ್ಯೆ ಸೇರಿದಂತೆ ಎಲ್ಲ ರೀತಿಯಲ್ಲೂ ಹೊಸ ದಾಖಲೆ ನಿರ್ಮಿಸಿದೆ.

ಕಳೆದ ವರ್ಷ ಜೂನ್ ತಿಂಗಳಲ್ಲಿ 24.10 ಲಕ್ಷ ಭಕ್ತಾದಿಗಳು ತಿಮ್ಮಪ್ಪನ ದರ್ಶನ ಪಡೆದುಕೊಂಡಿದ್ದರು. ಈ ವರ್ಷ ಹೆಚ್ಚುವರಿಯಾಗಿ 2.56ಲಕ್ಷ ಭಕ್ತಾದಿಗಳು ದೇವರ ದರ್ಶನ ಪಡೆದುಕೊಂಡಿದ್ದಾರೆ. ಅದರಂತೆಯೇ ಕಳೆದ ವರ್ಷದ ಜೂನ್ ತಿಂಗಳಲ್ಲಿ ಶ್ರೀವಾರಿ ಹುಂಡಿಗೆ 91.81 ಕೋಟಿ ಹರಿದುಬಂದಿತ್ತು. ಈ ವರ್ಷ 100.37 ಕೋಟಿ ರೂಪಾಯಿ ದಾಖಲೆಯ ಹಣ ಸಂಗ್ರಹವಾಗಿದೆ.

ಈ ವರ್ಷ ದೇವಾಲಯದ ಮಂಡಳಿಯ ವಸತಿಗಳಲ್ಲಿ ಶೇ 107ರಷ್ಟು ಭಕ್ತರು ವಾಸ್ತವ್ಯ ಹೂಡಿದ್ದರು. ಕಳೆದ ವರ್ಷ ಶೇ.106ರಷ್ಟು ಟಿಟಿಡಿ(ತಿರುಮಲ ತಿರುಪತಿ ದೇವಸ್ಥಾನಮ್) ವಸತಿಯನ್ನು ಬಳಸಿಕೊಂಡಿದ್ದರು. ಈ ವರ್ಷ 1.13 ಕೋಟಿ ಲಡ್ಡುಗಳನ್ನು ಭಕ್ತರಿಗೆ ವಿತರಿಸಲಾಗಿದೆ.

ಇದೇ ತಿಂಗಳು ಕಳೆದ ವರ್ಷ ಭಕ್ತಾದಿಗಳಿಗೆ ಸುಮಾರು 95.58 ಲಕ್ಷ ಲಡ್ಡುಗಳನ್ನು ವಿತರಿಸಲಾಗಿತ್ತು. ಅಷ್ಟೇ ಅಲ್ಲದೆ ಈ ವರ್ಷದ ಜೂನ್‍ನಲ್ಲಿ 12.88 ಲಕ್ಷ ಮಂದಿ ತಿಮ್ಮಪ್ಪನಿಗೆ ಮುಡಿ ನೀಡಿದ್ದಾರೆ. 71.02 ಲಕ್ಷ ಭಕ್ತಾದಿಗಳಿಗೆ ಅನ್ನ ಪ್ರಸಾದ ವಿತರಣೆ ಮಾಡಲಾಗಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago