ವಿಜಯಪುರ: ಪ್ರಾದೇಶಿಕ ಪಕ್ಷಗಳ ಮುಗಿಸಲು ಬಿಜೆಪಿ ಪ್ಲ್ಯಾನ್ ಮಾಡುತ್ತಿದೆ, ಇದು ಬಿಜೆಪಿಯವರ ಅಜೆಂಡಾ ಎಂದು `ಒಂದು ದೇಶ ಒಂದು ಚುನಾವಣೆ’ ಮಸೂದೆ ಮಂಡನೆ ವಿಚಾರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಕಿಡಿಕಾರಿದರು.
ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ದೇಶ ಒಂದು ಚುನಾವಣೆ ಎನ್ನುವುದು ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ವಿರೋಧವಾಗಿದೆ. ನಮ್ಮ ರಾಷ್ಟ್ರೀಯ ನಾಯಕರು ಇದನ್ನು ವಿರೋಧ ಮಾಡಿದ್ದಾರೆ ಬಿಜೆಪಿ ಈ ಮೂಲಕ ಸಣ್ಣ ಪಕ್ಷಗಳನ್ನು ಮುಗಿಸಲು ಪ್ಲ್ಯಾನ್ ಹಾಕಿಕೊಂಡಿದೆ. ಇತ್ತೀಚಿಗೆ ಸಣ್ಣ ಪಕ್ಷಗಳಿಗೆ ಹೆಚ್ಚು ನಂಬರ್ಸ್ ಬರುತ್ತಿದೆ. ಹಾಗಾಗಿ ಪ್ರಾದೇಶಿಕ ಪಕ್ಷಗಳ ಮುಗಿಸಲು ಪ್ಲ್ಯಾನ್ ಮಾಡಿಕೊಂಡಿದೆ ಎಂದು ವಾಗ್ದಾಳಿ ನಡೆಸಿದರು.
ಕೃಷ್ಣಾ ನದಿಗಾಗಿ 40,000 ಕೋಟಿ ರೂ. ಕೊಡುವುದಾಗಿ ಕಾಂಗ್ರೆಸ್ ಹೇಳಿತ್ತು. ಆದರೆ ಎರಡು ವರ್ಷ ಕಳೆದರೂ ಸರ್ಕಾರ ಬಿಡಿಗಾಸನ್ನು ಕೊಟ್ಟಿಲ್ಲ. ಜೊತೆಗೆ 5 ವರ್ಷದಲ್ಲಿ ರಾಜ್ಯಕ್ಕೆ 2 ಲಕ್ಷ ಕೋಟಿ ರೂ. ಹಾಗೂ ಅದರಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಗೆ 75 ಸಾವಿರ ಕೋಟಿ ರೂ. ಕೊಡುವುದಾಗಿ ಸರ್ಕಾರ ತಿಳಿಸಿತ್ತು. ಇದುವರೆಗೂ ಯೋಜನೆಗೆ ಬಿಡಿಗಾಸನ್ನು ಕೊಟ್ಟಿಲ್ಲ ಎಂದು ಕೇಳಿದಾಗ ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕೊಡುತ್ತಾರೆ ಎಂದು ಹೇಳಿ ಜಾರಿಕೊಂಡರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…