ಲಕ್ನೋ: ಉತ್ತರಪ್ರದೇಶದ ಮೊರಾದಾಬಾದ್‌ನಲ್ಲಿ ತಾಯಿಯೊಬ್ಬಳು ಮಗಳ ಮದುವೆಗೆಂದು ಜೋಪಾನವಾಗಿ ಕೂಡಿಟ್ಟ 18 ಲಕ್ಷ ರೂ. ಹಣವು ಬ್ಯಾಂಕ್‌ನ ಲಾಕರ್‌ನಲ್ಲಿ ಗೆದ್ದಲು ಹಿಡಿದು ನಾಶವಾಗಿರುವ ಘಟನೆ ವರದಿಯಾಗಿದೆ.
ಮೊರಾದಾಬಾದ್ ನಿವಾಸಿ ಅಲ್ಕಾ ಪಾಠಕ್ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಬ್ಯಾಂಕ್ ಆಫ್ ಬರೋಡಾದ ಆಶಿಯಾನಾ ಶಾಖೆಯಲ್ಲಿ 18 ಲಕ್ಷ ರೂಪಾಯಿ ಹಣವನ್ನು ಲಾಕರ್‌ನಲ್ಲಿ ಇರಿಸಿದ್ದರು. ಇತ್ತೀಚೆಗಷ್ಟೇ ಮಹಿಳೆಯನ್ನು ಸಂಪರ್ಕಿಸಿದ ಬ್ಯಾಂಕ್ ಸಿಬ್ಬಂದಿ ಲಾಕರ್ ಒಪ್ಪಂದವನ್ನು ರಿನಿವಲ್ ಮಾಡಲು ಮತ್ತು ಕೆವೈಸಿ ಮಾಹಿತಿ ಅಪ್ಡೇಟ್ ಮಾಡಲು ಶಾಖೆಗೆ ಭೇಟಿ ನೀಡುವಂತೆ ತಿಳಿಸಿದ್ದಾರೆ.
ಬ್ಯಾಂಕ್ಗೆ ಬಂದ ಅಲ್ಕಾ ಪಾಠಕ್ ತನ್ನ ಲಾಕರ್ ಅನ್ನು ಓಪನ್ ಮಾಡಿದ್ದಾರೆ. ಆದರೆ ಆಗ ಆಕೆಗೆ ದೊಡ್ಡ ಆಘಾತವಾಗಿದೆ. ಏಕೆಂದರೆ ಮಗಳ ಮದುವೆಗೆಂದು ಕಷ್ಟಪಟ್ಟು ಸಂಗ್ರಹಿಸಿಟ್ಟಿದ್ದ 18 ಲಕ್ಷ ರೂ. ಮೌಲ್ಯದ ನೋಟುಗಳನ್ನು ಗೆದ್ದಲು ಹುಳುಗಳು ತಿಂದಿದ್ದವು.
ಈ ಘಟನೆಯಿಂದ ಬ್ಯಾಂಕ್ ಅಧಿಕಾರಿಗಳೂ ಬೆಚ್ಚಿಬಿದ್ದಿದ್ದಾರೆ. ಈ ವಿಷಯ ವ್ಯಾಪಕವಾಗಿ ವರದಿಯಾದಾಗ ಮತ್ತು ಮಾಧ್ಯಮಗಳು ಉತ್ತರಕ್ಕಾಗಿ ಅವರನ್ನು ಒತ್ತಾಯಿಸಿದಾಗ ಬ್ಯಾಂಕ್ ಆಫ್ ಬರೋಡಾ ಪ್ರಧಾನ ಕಚೇರಿಗೆ ವರದಿಯನ್ನು ಕಳುಹಿಸಿರುವುದಾಗಿ ಬ್ಯಾಂಕ್ ಸಿಬ್ಬಂದಿ ಹೇಳಿದ್ದಾರೆ.
ತನಗಾದ ನಷ್ಟಕ್ಕೆ ಬ್ಯಾಂಕ್‌ನವರೇ ಪರಿಹಾರ ನೀಡಬೇಕೆಂದು ಮಹಿಳೆ ಆಗ್ರಹಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…