Featured

ಒಂದು ವಾಹನಕ್ಕೆ ದಿನಕ್ಕೆ 200 ಲೀಟರ್‌ ಮಾತ್ರ: ಡೀಸೆಲ್‌ ಮಾರಾಟ ಮಿತಿಗೊಳಿಸಿದ ಕೇಂದ್ರ – vishwanews24

ಒಂದು ವಾಹನಕ್ಕೆ ದಿನಕ್ಕೆ 200 ಲೀಟರ್‌ ಮಾತ್ರ: ಡೀಸೆಲ್‌ ಮಾರಾಟ ಮಿತಿಗೊಳಿಸಿದ ಕೇಂದ್ರ

ನವದೆಹಲಿ: ಡೀಸೆಲ್‌ ಮಾರಾಟಕ್ಕೆ ಕೇಂದ್ರ ಸರ್ಕಾರ ಮಿತಿ ಹೇರಿದೆ. ಪೆಟ್ರೋಲ್‌ ಬಂಕ್‌ಗಳಲ್ಲಿ ಒಂದು ವಾಹನಕ್ಕೆ ದಿನಕ್ಕೆ 200 ಲೀಟರ್‌ ಡೀಸೆಲ್‌ ಖರೀದಿಗೆ ಮಿತಿ ನಿಗದಿಪಡಿಸಲಾಗಿದೆ.

ಇಂಧನ ಅಕ್ರಮ ದಾಸ್ತಾನು ಮತ್ತು ಕಾಳಸಂತೆಯಲ್ಲಿ ಮಾರಾಟವನ್ನು ತಡೆಯಲು ಈ ಕ್ರಮಕೈಗೊಳ್ಳಲಾಗಿದೆ ಎಂದು ಕೇಂದ್ರ ತಿಳಿಸಿದೆ.

ವಾಣಿಜ್ಯ, ಕೈಗಾರಿಕಾ ಮತ್ತು ಸಾಂಸ್ಥಿಕ ಗ್ರಾಹಕರು ಇನ್ಮುಂದೆ ರಿಟೇಲ್‌ ಬಂಕ್‌ಗಳಲ್ಲಿ ಡೀಸೆಲ್‌ ಖರೀದಿಸುವಂತಿಲ್ಲ. ವಾಣಿಜ್ಯ ಉದ್ದೇಶಕ್ಕೆ ನಿಗದಿಪಡಿಸಿದ ಮಾರಾಟ ಕೇಂದ್ರಗಳಿಂದಲೇ ಇಂಧನ ಖರೀದಿಸಬೇಕು ಎಂದು ಸೂಚಿಸಿದೆ. ಪೆಟ್ರೋಲ್ ಪಂಪ್‌ಗಳಲ್ಲಿ ಡೀಸೆಲ್ ಲೀಟರ್‌ಗೆ 95.20 ರೂ.ಗಳಾಗಿದ್ದರೆ, ಬೃಹತ್ ಮಾರಾಟ ಕೇಂದ್ರಗಳಲ್ಲಿ ಈ ಬೆಲೆ 134.50 ರೂ. ಇದೆ. ದರ ಕಡಿಮೆ ಇರುವುದರಿಂದ ಬೃಹತ್‌ ವಾಹನಗಳ ಗ್ರಾಹಕರು ಪೆಟ್ರೋಲ್‌ ಬಂಕ್‌ಗಳಲ್ಲಿ ಇಂಧನ ಖರೀದಿಸುತ್ತಿದ್ದಾರೆ. ಇದನ್ನು ತಪ್ಪಿಸಲು ಹೊಸ ನಿಯಮ ಜಾರಿಗೊಳಿಸಲಾಗಿದೆ.

ರಿಟೇಲ್‌ ಬಂಕ್‌ಗಳಲ್ಲಿ ಡೀಸೆಲ್‌ ಅನ್ನು ವಾಹನದ ಇಂಧನ ಟ್ಯಾಂಕ್‌ಗೇ ತುಂಬಿಸಿ ಮಾರಬೇಕು. ಕ್ಯಾನ್‌, ಬ್ಯಾರೆಲ್‌ಗಳಲ್ಲಿ ತುಂಬಿಸಿ ಮಾರುವಂತಿಲ್ಲ. ಪೆಟ್ರೋಲಿಯಂ ಮತ್ತು ಸ್ಫೋಟಕ ಸುರಕ್ಷಿತಾ ಸಂಸ್ಥೆ ಅನುಮತಿಸಿದ ಕ್ಯಾನ್‌ನಲ್ಲಿ ಡೀಸೆಲ್‌ ಖರೀದಿಸಬಹುದು ಎಂದು ಸೂಚನೆ ನೀಡಿದೆ.

ಮಧ್ಯಪ್ರಾಚ್ಯ ಯುದ್ಧದಿಂದ ಜಾಗತಿಕ ಮಟ್ಟದಲ್ಲಿ ತೈಲ ಬಿಕ್ಕಟ್ಟು ಉಂಟಾಗಿದೆ. ಭಾರತದಲ್ಲೂ ಪೆಟ್ರೋಲ್‌ ಮತ್ತು ಡೀಸೆಲ್‌ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಹೀಗಾಗಿ, ರಿಟೇಲ್‌ ಬಂಕ್‌ಗಳಲ್ಲಿ ಇಂಧನ ಕೊರತೆ ಆಗದಂತೆ ನೋಡಿಕೊಳ್ಳಲು ಮಿತಿ ಕ್ರಮ ಅನುಸರಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ

Vishwa News 24

Recent Posts

ಜನರ ಕೋಪ ನೋಡಿದರೆ ಮುಂದಿನ ಚುನಾವಣೆಯನ್ನು ನಾವು ಈಗಾಗಲೇ ಗೆದ್ದಿದ್ದೇವೆ: ರಾಹುಲ್ ಗಾಂಧಿ – vishwanews24

ಒಟ್ಟಾಗಿ ನಿಂತು ವಿರೋಧಿಸಿದರೆ ಬಿಜೆಪಿಯನ್ನು ಸೋಲಿಸುವುದು ಸುಲಭ .. ಬಿಜೆಪಿ ನಡೆಸುತ್ತಿರುವ ಪ್ರಚಾರಕ್ಕೆ ಪಕ್ಷದ ನಾಯಕರು ಬಲಿಯಾಗಬಾರದು :ರಾಹುಲ್ ಗಾಂಧಿ…

1 hour ago

ಬೆಂಗಳೂರು ಅಭಿವೃದ್ಧಿ ಖಾತೆ ವಹಿಸಿಕೊಳ್ಳದ ಕೃಷ್ಣ ಬೈರೇಗೌಡ ; ಖಾತೆ ವಿಚಾರಕ್ಕೆ ಸ್ಪಷ್ಟತೆ ಬೇಕು ಎಂದ ಸಚಿವ – vishwanews24

ಬೆಂಗಳೂರು ಅಭಿವೃದ್ಧಿ ಖಾತೆ ವಹಿಸಿಕೊಳ್ಳದ ಕೃಷ್ಣ ಬೈರೇಗೌಡ ; ಖಾತೆ ವಿಚಾರಕ್ಕೆ ಸ್ಪಷ್ಟತೆ ಬೇಕು ಎಂದ ಸಚಿವ ಬೆಂಗಳೂರು: ಪ್ರಮಾಣವಚನ…

1 hour ago

ಪೆಟ್ರೋಲ್, ಗ್ಯಾಸ್‌ ಬೆನ್ನಲ್ಲೇ ಗ್ರಾಹಕರಿಗೆ ಮತ್ತೊಂದು ಶಾಕ್ : ಗಗನಕ್ಕೇರಿದ ಅಕ್ಕಿ ಬೆಲೆ ; ಕೆಜಿಗೆ 10 ರಿಂದ 20 ರೂ. ಹೆಚ್ಚಳ – vishwanews24

ಪೆಟ್ರೋಲ್, ಗ್ಯಾಸ್‌ ಬೆನ್ನಲ್ಲೇ ಗ್ರಾಹಕರಿಗೆ ಮತ್ತೊಂದು ಶಾಕ್ : ಗಗನಕ್ಕೇರಿದ ಅಕ್ಕಿ ಬೆಲೆ ; ಕೆಜಿಗೆ 10 ರಿಂದ 20…

1 hour ago

ಧರ್ಮಸ್ಥಳ ಬುರುಡೆ ಕೇಸ್: ನಟ ಪ್ರಕಾಶ್ ರಾಜ್ ವಿರುದ್ಧ ವಿಶೇಷ ತನಿಖೆ ಆಗಲಿ: ಪ್ರಮೋದ್ ಮುತಾಲಿಕ್ ಆಗ್ರಹ – vishwanews24

ಧರ್ಮಸ್ಥಳ ಬುರುಡೆ ಕೇಸ್: ನಟ ಪ್ರಕಾಶ್ ರಾಜ್ ವಿರುದ್ಧ ವಿಶೇಷ ತನಿಖೆ ಆಗಲಿ: ಪ್ರಮೋದ್ ಮುತಾಲಿಕ್ ಆಗ್ರಹ ಬೆಳಗಾವಿ: ಧರ್ಮಸ್ಥಳ…

2 hours ago

ಬಂಟ್ವಾಳ: ಯುವತಿ ನಾಪತ್ತೆ – vishwanews24

ಬಂಟ್ವಾಳ: ಯುವತಿ ನಾಪತ್ತೆ ಬಂಟ್ವಾಳ: ತಂದೆ, ತಾಯಿ ಕೆಲಸಕ್ಕೆ ಹೋಗಿದ್ದ ವೇಳೆ ಮನೆಯಿಂದ ಮಗಳು ನಾಪತ್ತೆಯಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ…

2 hours ago

ಪಕ್ಷಕ್ಕಾಗಿ ದುಡಿದ ಪ್ರತಿಯೊಬ್ಬ ನಿಷ್ಠಾವಂತ ಕಾರ್ಯಕರ್ತರಿಗೆ ಉತ್ತಮ ಅವಕಾಶ ಖಚಿತ : ಸಚಿವ ಯು.ಟಿ.ಖಾದರ್ – vishwanews24

ಪಕ್ಷಕ್ಕಾಗಿ ದುಡಿದ ಪ್ರತಿಯೊಬ್ಬ ನಿಷ್ಠಾವಂತ ಕಾರ್ಯಕರ್ತರಿಗೆ ಉತ್ತಮ ಅವಕಾಶ ಖಚಿತ : ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದ…

2 hours ago