Featured

ಒಂದು ವೇಳೆ ನಾಳೆಯೇ ಚುನಾವಣೆ ನಡೆದರೂ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ; ಇದು ನೂರಕ್ಕೆ ನೂರು ಸತ್ಯ : ಸಿದ್ದರಾಮಯ್ಯ -Vishwanews24

ಒಂದು ವೇಳೆ ನಾಳೆಯೇ ಚುನಾವಣೆ ನಡೆದರೂ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ; ಇದು ನೂರಕ್ಕೆ ನೂರು ಸತ್ಯ : ಸಿದ್ದರಾಮಯ್ಯ –Vishwanews24

ಬೆಂಗಳೂರು : ”ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪನವರು ಅಧಿಕಾರ ಕಳೆದುಕೊಳ್ಳುವ ಭಯದಲ್ಲಿ ಬಿಜೆಪಿ ಶೇ. 60 ಪಂಚಾಯತ್‌ಗಳಲ್ಲಿ ಗೆದ್ದಿದೆ ಎಂದು ಸುಳ್ಳು ಹೇಳುತ್ತಿದ್ದಾರೆ” ಎಂದು ಹೇಳಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ”ಒಂದು ವೇಳೆ ನಾಳೆಯೇ ಚುನಾವಣೆ ನಡೆದರೂ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ. ಇದು ನೂರಕ್ಕೆ ನೂರು ಸತ್ಯ” ಎಂದಿದ್ದಾರೆ.

 

ಗ್ರಾಮ ಪಂಚಾಯತ್‌ ಚುನಾವಣೆಗೆ ಸಂಬಂಧಿಸಿ ಟ್ವೀಟ್‌ ಮಾಡಿರುವ ಅವರು, ”ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಅಭಿನಂದನೆಗಳು. ನಮ್ಮ ಅಭ್ಯರ್ಥಿಗಳ ಗೆಲುವಿಗೆ ಹಗಲಿರುಳೆನ್ನದೆ ಶ್ರಮಿಸಿದ ಕಾರ್ಯಕರ್ತರಿಗೆ ಹಾಗೂ ಮತ ನೀಡಿ, ಆಶೀರ್ವದಿಸಿದ ಮತದಾರರಿಗೆ ಧನ್ಯವಾದಗಳು” ಎಂದು ತಿಳಿಸಿದ್ದಾರೆ.

”ಗ್ರಾಮಗಳ ಪ್ರಗತಿಯಲ್ಲಿ ದೇಶದ ಉನ್ನತಿ ಅಡಗಿದೆ. ಈ ಕಾರಣಕ್ಕಾಗಿ ಈ ಬಾರಿಯ ಚುನಾವಣೆಯಲ್ಲಿ ಜಯಗಳಿಸಿದ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ತಮ್ಮ ಗ್ರಾಮವನ್ನು ಸದೃಢಗೊಳಿಸುವ ಕಾರ್ಯದಲ್ಲಿ ಪಕ್ಷಾತೀತವಾಗಿ ಕೆಲಸ ಮಾಡಬೇಕೆಂಬುದು ನನ್ನ ಸಲಹೆ” ಎಂದು ಹೇಳಿದ್ದಾರೆ.

”ಇನ್ನೂ ಹಲವು ಜಿಲ್ಲೆಗಳಲ್ಲಿ ಮತ ಎಣಿಕೆ ಕಾರ್ಯ ಪೂರ್ಣಗೊಂಡು ಫಲಿತಾಂಶ ಹೊರಬಂದಿಲ್ಲ, ಮೀಸಲಾತಿ ಅಡಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಹಂಚಿಕೆಯಾಗಿಲ್ಲ, ಆಗಲೇ ಯಡಿಯೂರಪ್ಪ ಅವರು ನಮ್ಮ ಪಕ್ಷ 3800ಕ್ಕೂ ಅಧಿಕ ಪಂಚಾಯತಿಗಳಲ್ಲಿ ಗೆದ್ದಿದೆ ಎಂದು ಹೇಳಿಕೆ ನೀಡುತ್ತಿರುವುದು ಹಾಸ್ಯಾಸ್ಪದ” ಎಂದು ಲೇವಡಿ ಮಾಡಿದ್ದಾರೆ.

”ಅಧಿಕಾರ ಕಳೆದುಕೊಳ್ಳುವ ಭಯದಲ್ಲಿ ಯಡಿಯೂರಪ್ಪನವರು ಬಿಜೆಪಿ 60% ಪಂಚಾಯತಿಗಳಲ್ಲಿ ಗೆದ್ದಿದೆ ಎಂದು ಸುಳ್ಳು ಹೇಳುತ್ತಿದ್ದಾರೆ. ನನಗಿರುವ ಮಾಹಿತಿ ಪ್ರಕಾರ ಗೆದ್ದ ಹೆಚ್ಚಿನ ಸಂಖ್ಯೆಯ ಪಂಚಾಯತಿ ಸದಸ್ಯರು ಕಾಂಗ್ರೆಸ್ ಕಾರ್ಯಕರ್ತರಾಗಿದ್ದಾರೆ” ಎಂದು ಹೇಳಿದ್ದಾರೆ.

”ಯಡಿಯೂರಪ್ಪನವರ ಮುಖ್ಯಮಂತ್ರಿ ಕುರ್ಚಿಯೇ ಅಲ್ಲಾಡ್ತಿದೆ, ಅದರ ನಡುವೆಯೂ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತೆ ಎಂದು ಹಗಲುಗನಸು ಕಾಣ್ತಿದ್ದಾರೆ. ಒಂದು ವೇಳೆ ನಾಳೆಯೇ ಚುನಾವಣೆ ನಡೆದರೂ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ. ಇದು ನೂರಕ್ಕೆ ನೂರು ಸತ್ಯ” ಎಂದಿದ್ದಾರೆ.

 

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago