ಕಲಬುರಗಿ: ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನವನ್ನು ನಿರ್ವಹಿಸುವುದಕ್ಕೆ ಹಲವಾರು ಮಂದಿಗೆ ಅರ್ಹತೆ ಇರಬಹುದು. ಆದರೆ ನಮ್ಮ ಪಕ್ಷ ಒಂದು ವೇಳೆ ಆ ಜವಾಬ್ದಾರಿ ನನಗೆ ನೀಡಿದರೆ ಸಮರ್ಥವಾಗಿ ನಿಭಾಯಿಸಲು ಸಿದ್ಧ ಎಂದು ಇಂಧನ ಖಾತೆಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ತಿಳಿಸಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷವನ್ನು ಮುನ್ನಡೆಸುವ ಯೋಗ್ಯತೆ ಇವತ್ತಿನ ಯುವ ಸಮುದಾಯಕ್ಕಿದೆ. ನಾನೊಬ್ಬ ಪಕ್ಷದ ಸಾಮಾನ್ಯ ಕಾರ್ಯಕರ್ತ. ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದೂ ನನಗೆ ಗೊತ್ತಿರಲಿಲ್ಲ.
ನಮ್ಮ ಹಿರಿಯರು ನನಗೆ ಸೂಚನೆ ಕೊಟ್ಟ ಹಿನ್ನೆಲೆಯಲ್ಲಿ ಚುನಾವಣೆಗೆ ಸ್ಪರ್ಧೆ ಮಾಡಿದ್ದೇನೆ. ಪ್ರಮುಖವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ತತ್ಕ್ಷಣ ಬದಲಾವಣೆ ಆಗುತ್ತದೆ ಎನ್ನುವುದು ನನಗೇನು ಅನಿಸುತ್ತಿಲ್ಲ. ಮುಂಬರುವ ಚುನಾವಣೆಯಲ್ಲಿ 130 ರಿಂದ 150 ಸ್ಥಾನ ಗೆಲ್ಲುವುದು ಪಕ್ಷದ ಗುರಿಯಾಗಿದೆ ಎಂದು ಸುನಿಲ್ ಕುಮಾರ್ ತಿಳಿಸಿದರು.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…