ಹೈದರಾಬಾದ್: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಚುನಾವಣೋತ್ತರ ಮೈತ್ರಿಗೆ ತಮ್ಮ ಪಕ್ಷ ಮುಕ್ತವಾಗಿದೆ, ಎಂದು ತೆಲಂಗಾಣ ಮುಖ್ಯಮಂತ್ರಿ ಮತ್ತು ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಪಕ್ಷದ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ ಹೇಳಿದ್ದಾರೆ. ಮೂಲಗಳ ಪ್ರಕಾರ, ಇಂದು ರಾಷ್ಟ್ರ ರಾಜಧಾನಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾದ ರಾವ್, ಗಂಟೆಗೂ ಹೆಚ್ಚು ಕಾಲ 2019ರ ಲೋಕಸಭಾ ಚುನಾವಣೆಯ ಬಗ್ಗೆ ಚರ್ಚೆ ನಡೆಸಿದ್ದಾರೆ. ಚುನಾವಣಾ ಪೂರ್ವ ಮೈತ್ರಿ ನಮ್ಮ ಪಕ್ಷಕ್ಕೆ ಯಾವುದೇ ಪ್ರಯೋಜನ ತರದು. ಒಂದು ವೇಳೆ ಬಿಜೆಪಿ ಬಹುಮತದಿಂದ ವಂಚಿತವಾದರೆ ಸರಕಾರ ರಚಿಸಲು ನಾವು ಕೈ ಜೋಡಿಸುತ್ತೇವೆ ಎಂದು ರಾವ್ ಭೇಟಿ ವೇಳೆ ವಾಗ್ದಾನ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ಇತ್ತೀಚೆಗಷ್ಟೇ ಲೋಕಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಟಿಡಿಪಿ ಮಂಡಿಸಿದ್ದ ಅವಿಶ್ವಾಸ ನಿರ್ಣಯದ ಮತದಾನ ಪ್ರಕ್ರಿಯೆಯಿಂದ ದೂರ ಸರಿಯುವ ಮೂಲಕ ಪರೋಕ್ಷವಾಗಿ ಟಿಆರ್‌ಎಸ್ ಮೋದಿ ಸರ್ಕಾರಕ್ಕೆ ಬೆಂಬಲ ನೀಡಿತ್ತು. ಎನ್ ಡಿಎ ಮೈತ್ರಿಕೂಟದದಿಂದ ಟಿಡಿಪಿ ಹಿಂದೆ ಸರಿದ ಬಳಿಕ ಬಿಜೆಪಿ ಈಗ ಟಿಆರ್ ಎಸ್‌ನೊಂದಿಗೆ ನಿಕಟತೆ ಹೊಂದಲು ಯತ್ನಿಸುತ್ತಿದೆ ಎನ್ನಲಾಗಿದೆ.
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…
ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…