ಚಿತ್ರದುರ್ಗ: ಒಂದು ವೇಳೆ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆದಿದ್ದೇ ಆದಲ್ಲಿ ಬಿಜೆಪಿ 160 ಸ್ಥಾನಗಳನ್ನು ಗೆಲ್ಲಲಿದೆ ಎಂದು ಮಾಜಿ ಸಚಿವ ಹಾಗೂ ಮೊಳಕಾಲ್ಮೂರು ಶಾಸಕ ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಮಿಶ್ರ ಸರ್ಕಾರ ಉಳಿಸಿಕೊಳ್ಳಲು ತೇಪೆ ಹಚ್ಚುವ ಕಾರ್ಯ ನಡೆಯುತ್ತಿದೆ. ನಾನು ಚಿವುಟುತ್ತೇನೆ, ನೀನು ಅಳುವಂತೆ ಮಾಡು ಎಂಬ ವರ್ತನೆಯನ್ನು ಜೆಡಿಎಸ್, ಕಾಂಗ್ರೆಸ್ ಪಕ್ಷಗಳು ಹಿಂದಿವೆ. ಒಂದು ವೇಳೆ ಮಧ್ಯಂತರ ಚುನಾವಣೆ ಬಂದರೆ ಇರುವ ಸ್ಥಾನಗಳನ್ನೂ ಕಾಂಗ್ರೆಸ್ ಕಳೆದುಕೊಳ್ಳಲಿದೆ ಎಂದು ಶ್ರೀರಾಮುಲು ಹೇಳಿದರು.
ಇದೇ ವೇಳೆ ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯದ ಬಗ್ಗೆ ಟೀಕಿಸಿದ ಶ್ರೀರಾಮುಲು, ರಾಜ್ಯದಲ್ಲಿ ಒಂದೆಡೆ ಬರಗಾಲ ಉಂಟಾಗಿ ಜನರು ನೀರಿಲ್ಲದೆ ಬವಣಿಸುತ್ತಿದ್ದಾರೆ.
ಇಂತಹ ಸಂದರ್ಭದಲ್ಲಿ ಸಿಎಂ ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯಕ್ಕೆ ಕೋಟ್ಯಂತರ ರೂ. ಖರ್ಚು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…