Featured

ಒಎಲ್ಎಕ್ಸ್ ನೋಡಿ, ಟೆಸ್ಟ್ ರೈಡ್ ನೆಪದಲ್ಲಿ ದುಬಾರಿ ಬೆಲೆಯ ಬೈಕ್‌ಗಳ ಕಳ್ಳತನ ..

ಬೆಂಗಳೂರುಟೆಸ್ಟ್ ರೈಡ್ ನೆಪದಲ್ಲಿ ದುಬಾರಿ ಬೆಲೆಯ ಬೈಕ್‌ಗಳನ್ನು ಕಳ್ಳತನ ಮಾಡುತ್ತಿದ್ದ ಮಂಜುನಾಥ ಹೆಗಡೆ (20) ಎಂಬಾತನನ್ನು ಬಂಧಿಸಿರುವ ಎಲೆಕ್ಟ್ರಾನಿಕ್‌ಸಿಟಿ ಪೊಲೀಸರು, ₹ 12 ಲಕ್ಷ ಮೌಲ್ಯದ ಬುಲೆಟ್ ಹಾಗೂ ಐದು ಕೆಟಿಎಂ ಬೈಕ್‌ಗಳನ್ನು ಜಪ್ತಿ ಮಾಡಿದ್ದಾರೆ.

ಸುಂಕದಕಟ್ಟೆ ನಿವಾಸಿಯಾದ ಈತ, ಪ್ರತಿದಿನ ಒಎಲ್‌ಎಕ್ಸ್‌ನಲ್ಲಿ ಜಾಹೀರಾತುಗಳನ್ನು ನೋಡುತ್ತಿದ್ದ. ಕೆಟಿಎಂ ಅಥವಾ ಬುಲೆಟ್ ಬೈಕ್‌ ಮಾರಾಟಕ್ಕಿದ್ದರೆ, ಕೂಡಲೇ ಅದರ ಮಾಲೀಕರಿಗೆ ಕರೆ ಮಾಡಿ ತಾನು ಖರೀದಿ ಮಾಡುವುದಾಗಿ ಹೇಳುತ್ತಿದ್ದ. ಬಳಿಕ ಬೈಕ್ ನೋಡಬೇಕೆಂದು ಅವರನ್ನು ಕರೆಸಿಕೊಳ್ಳುತ್ತಿದ್ದ.

‘ಒಮ್ಮೆ ಓಡಿಸಿ ನೋಡುತ್ತೇನೆ’ ಎಂದು ನಂಬಿಸಿ ಬೈಕ್ ತೆಗೆದುಕೊಂಡು ಹೋಗುತ್ತಿದ್ದ ಮಂಜುನಾಥ, ವಾಪಸ್ ಬರುತ್ತಲೇ ಇರಲಿಲ್ಲ. ಇದೇ ರೀತಿ ಹುಳಿಮಾವು, ಬನ್ನೇರುಘಟ್ಟ, ಆನೇಕಲ್, ಪರಪ್ಪನ ಅಗ್ರಹಾರ ಹಾಗೂ ಎಲೆಕ್ಟ್ರಾನಿಕ್‌ ಸಿಟಿ ಠಾಣೆಗಳ ವ್ಯಾಪ್ತಿಯಿಂದ ಆರು ಬೈಕ್‌ಗಳನ್ನು ಕಳವು ಮಾಡಿದ್ದ ಆರೋಪಿ, ಕಡಿಮೆ ಬೆಲೆಗೆ ಅವುಗಳನ್ನು ಮಾರಾಟ ಮಾಡಿ ಗೋವಾದ ಕ್ಯಾಸಿನೋಗೆ ಹೋಗಿ ಮೋಜು ಮಾಡುತ್ತಿದ್ದ ಎಂದು ಪೊಲೀಸರು ಹೇಳಿದರು.

1 ಮೊಬೈಲ್‌ 40 ಸಿಮ್: ‘ಪೊಲೀಸರು ಮೊಬೈಲ್ ಸಂಖ್ಯೆಯಿಂದ ತನ್ನನ್ನು ಪತ್ತೆ ಮಾಡಬಹುದೆಂದು ಆತ 40 ಸಿಮ್‌ಗಳನ್ನು ಇಟ್ಟುಕೊಂಡಿದ್ದ. ಒಬ್ಬರಿಗೆ ಕರೆ ಮಾಡಿ ಬೈಕ್ ಕದ್ದರೆ, ಮತ್ತೆ ಆ ಸಿಮ್ ಬಳಸುತ್ತಿರಲಿಲ್ಲ’ ಎಂದು ಪೊಲೀಸರು ಹೇಳಿದರು.

ಟೆಸ್ಟ್ ರೈಡ್ ನೆಪದಲ್ಲೇ ವಾಹನ ಕದಿಯುವ ಹಳೆ ಆರೋಪಿಗಳ ಫೋಟೊಗಳನ್ನು ದೂರುದಾರರಿಗೆ ತೋರಿಸಿದಾಗ, ಒಬ್ಬರು ಮಂಜುನಾಥನನ್ನು ಗುರುತಿಸಿದರು. ಎಂಟು ತಿಂಗಳ ಹಿಂದೆ ಕೆ.ಜಿ.ಹಳ್ಳಿ ಪೊಲೀಸರಿಗೆ ಸಿಕ್ಕಿಬಿದ್ದು ಜೈಲು ಸೇರಿದ್ದ ಈತ ಒಂದೂವರೆ ತಿಂಗಳ ಹಿಂದೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ.

‘ಆರೋಪಿ ಯಾವ್ಯಾವ ಸಂಖ್ಯೆಗಳಿಂದ ದೂರುದಾರರಿಗೆ ಕರೆ ಮಾಡಿದ್ದನೋ, ಆ ಸಂಖ್ಯೆಗಳನ್ನು ಪಡೆದು ತನಿಖೆ ಪ್ರಾರಂಭಿಸಿದೆವು. 40ರಲ್ಲಿ ಒಂದು ಸಿಮ್ ಮಾತ್ರ ಚಾಲ್ತಿಯಲ್ಲಿತ್ತು. ಅದರ ಜಾಡು ಹಿಡಿದು ಹೊರಟಾಗ ಯಲಹಂಕದಲ್ಲಿ ಆರೋಪಿ ಸಿಕ್ಕಿಬಿದ್ದ’ ಎಂದು ಮಾಹಿತಿ ನೀಡಿದರು.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago