ಭುವನೇಶ್ವರ, : ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಿಜೆಡಿ ಸೋತ ಬಳಿಕ ಇದೀಗ ನಿರ್ಗಮಿತ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ರಾಜೀನಾಮೆ ನೀಡಿದ್ದಾರೆ.
ನವೀನ್ ಪಟ್ನಾಯಕ್ ಅವರು ಇಂದು ಬೆಳಗ್ಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲ ರಘುಬರ್ ದಾಸ್ ಅವರನ್ನು ಭೇಟಿ ಮಾಡಿದ್ದಾರೆ. ಆ ನಂತರ ರಾಜ್ಯಪಾಲರಿಗೆ ತನ್ನ ರಾಜೀನಾಮೆ ಪತ್ರವನ್ನು ನವೀನ್ ಪಟ್ನಾಯಕ್ ಸಲ್ಲಿಸಿದ್ದಾರೆ.
ಒಡಿಶಾ ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ನಿನ್ನೆ ಚುನಾವಣಾ ಆಯೋಗ ಪ್ರಕಟಿಸಿತು. ಈ ಫಲಿತಾಂಶದ ಪ್ರಕಾರ ಬಿಜೆಪಿಯು 71 ಸ್ಥಾನಗಳನ್ನು ಗೆದ್ದರೆ ನವೀನ್ ಪಟ್ನಾಯಕ್ ಅವರ ಬಿಜೆಡಿ ಕೇವಲ 51 ಸ್ಥಾನವನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಬಿಜೆಡಿಯು 24 ವರ್ಷಗಳ ಬಳಿಕ ತನ್ನ ಅಧಿಕಾರವನ್ನು ಕಳೆದುಕೊಂಡಿದೆ. ಇನ್ನು ಒಡಿಶಾದಲ್ಲಿ 147 ವಿಧಾನಸಭಾ ಸ್ಥಾನಗಳಿದ್ದು, ಸರ್ಕಾರ ರಚನೆಗೆ ಬಹುಮತಕ್ಕೆ 74 ಸ್ಥಾನಗಳ ಅಗತ್ಯವಿದೆ. ಇನ್ನು ಕಾಂಗ್ರೆಸ್ 14 ಸ್ಥಾನಗಳನ್ನು ಪಡೆದುಕೊಂಡಿದೆ.
2019ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಡಿ 112 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಬಿಜೆಪಿ 23 ಸ್ಥಾನಗಳನ್ನು, ಕಾಂಗ್ರೆಸ್ 9 ಸ್ಥಾನಗಳನ್ನು, ಸಿಪಿಐ(ಎಂ) ಕೇವಲ 1 ಸ್ಥಾನವನ್ನು ಪಡೆದುಕೊಂಡಿತ್ತು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…