Featured

ಒಡಿಶಾ : 3 ರೈಲುಗಳ ನಡುವೆ ಭೀಕರ ಅಪಘಾತ : ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಏರಿಕೆ, 240 ಮಂದಿ ಬಲಿ – Vishwanews24

ಒಡಿಶಾ : 3 ರೈಲುಗಳ ನಡುವೆ ಭೀಕರ ಅಪಘಾತ : ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಏರಿಕೆ, 240 ಮಂದಿ ಬಲಿ

ಭುವನೇಶ್ವರ : ಒಡಿಶಾದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, ಕೋರಮಂಡಲ್ ಎಕ್ಸ್ಪ್ರೆಸ್ ಮತ್ತು ಗೂಡ್ಸ್ ರೈಲು ಬಾಲಸೋರ್ನ ಬಹನಾಗ ನಿಲ್ದಾಣದ ಬಳಿ ಡಿಕ್ಕಿ ಹೊಡೆಡ ಪರಿಣಾಮ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 240 ಕ್ಕೆ ಏರಿಕೆಯಾಗಿದೆ.

ಚೆನ್ನೈ-ಕೊರೊಮಂಡೆಲ್ ಎಕ್ಸ್‌ಪ್ರೆಸ್ ರೈಲು, ಯಶವಂತಪುರ-ಹೌರ ರೈಲು ಹಾಗೂ ಗೂಡ್ಸ್ ರೈಲು ಮುಖಾಮುಖಿ ಡಿಕ್ಕಿಯಾಗಿದ್ದವು. ಒಡಿಶಾದ ಬಾಲಾಸೋರ್ ಜಿಲ್ಲೆಯ ಬಹನಗ ರೈಲು ನಿಲ್ದಾಣದ ಬಳಿ ಈ ಅಪಘಾತ ಸಂಭವಿಸಿತು. 12841 ಎಕ್ಸ್‌ಪ್ರೆಸ್ ರೈಲು ಡಿಕ್ಕಿಯಾದ ರಭಸಕ್ಕೆ ಪ್ರಯಾಣಿಕರಿದ್ದ ರೈಲಿನ ಹಲವು ಬೋಗಿಗಳು ಹಳಿ ತಪ್ಪಿ, ಭೀಕರ ಅಪಘಾತದಲ್ಲಿ ಹಲವರು ಮೃತಪಟ್ಟಿದ್ದಾರೆ.

ಒಡಿಶಾ ರೈಲು ಅಪಘಾತದಲ್ಲಿ ಮೃತರಾದವರ ಕುಟುಂಬಕ್ಕೆ 10 ಲಕ್ಷ ಪರಿಹಾರವನ್ನು ಕೇಂದ್ರ ಸರ್ಕಾರ ಘೋಷಿಸಿದೆ

ಈ ಕುರಿತು ಮಾಹಿತಿ ನೀಡಿದಂತ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಅಪಘಾತದಲ್ಲಿ ಮೃತಪಟ್ಟವರಿಗೆ 10 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂ., ಸಣ್ಣಪುಟ್ಟ ಗಾಯಗೊಂಡವರಿಗೆ 50,000 ರೂ ಪರಿಹಾರ ನೀಡಲಾಗುವುದು ಎಂದು ಘೋಷಿದರು.

ಸಹಾಯವಾಣಿ ಆರಂಭ

ಬಾಲಸೋರ್ ನ ಬಹನಾಗ ನಿಲ್ದಾಣದ ಬಳಿ ಶಾಲಿಮಾರ್-ಚೈನ್ನೈ ಕೋರಮಂಡಲ್ ಎಕ್ಸ್ ಪ್ರೆಸ್ ರೈಲು ಗೂಡ್ಸ್ ಗಾಡಿಗೆ ಡಿಕ್ಕಿಯಾಗಿ ಹಳಿತಪ್ಪಿದ ಬೆನ್ನಲ್ಲೇ, ಬೆಂಗಳೂರು-ಹೌರಾ ರೈಲು ಕೂಡ ಹಳಿತಪ್ಪಿ 3-4 ಬೋಗಿಗಳು ಜಖಂಗೊಂಡಿರುವುದಾಗಿ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ನೈರುತ್ಯ ರೈಲ್ವೆ ಇಲಾಖೆಯಿಂದ ಸಹಾಯವಾಣಿ ಸಂಖ್ಯೆಯನ್ನು ಕೂಡ ಆರಂಭಿಸಲಾಗಿದೆ.

ಈ ಕುರಿತಂತೆ ಮಾಹಿತಿ ನೀಡಿರುವಂತ ರೈಲ್ವೆ ವಕ್ತಾರ ಅಮಿತಾಭ್ ಶರ್ಮಾ ಅವರು, ಒಡಿಶಾದ ಬಾಲಸೋರ್ ನ ಬಹನಾಗದಲ್ಲಿ ಸಂಜೆ 7 ಗಂಟೆ ಸುಮಾರಿಗೆ ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್ಪ್ರೆಸ್ನ 10-12 ಬೋಗಿಗಳು ಬಾಲೇಶ್ವರ್ ಬಳಿ ಹಳಿ ತಪ್ಪಿ ವಿರುದ್ಧ ಹಳಿಗೆ ಬಿದ್ದಿವೆ ಎಂದಿದ್ದಾರೆ.

ಇನ್ನೂ ಈ ರೈಲಿನ ಸ್ವಲ್ಪ ಸಮಯದ ನಂತರ ಯಶವಂತಪುರದಿಂದ ಹೌರಾಗೆ ತೆರಳುತ್ತಿದ್ದ ಮತ್ತೊಂದು ರೈಲು ಹಳಿತಪ್ಪಿದ ಬೋಗಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಅದರ 3-4 ಬೋಗಿಗಳು ಹಳಿ ತಪ್ಪಿವೆ ಎಂದು ತಿಳಿಸಿದ್ದಾರೆ.

ಇದೀಗ ನೈರುತ್ಯ ರೈಲ್ವೆ ಇಲಾಖೆಯಿಂದ ಪ್ರಯಾಣಿಕರ ಸುರಕ್ಷತೆಗಾರಿ ಸಹಾಯವಾಣಿ ಸಂಖ್ಯೆಯನ್ನು ಆರಂಭಿಸಿದೆ. ಸಂಬಂಧಪಟ್ಟ ಕುಟುಂಬಸ್ಥರು ಸಂಪರ್ಕಿಸುವಂತೆ ತಿಳಿಸಿದೆ.

ಹೀಗಿವೆ ನೈಋತ್ಯ ರೈಲ್ವೆ ಸ್ಥಾಪಿಸಿದ ಸಹಾಯವಾಣಿ ಸಂಖ್ಯೆಗಳು

ಬೆಂಗಳೂರು 080-22356409

ಬಂಗಾರಪೇಟೆ: 08153 255253

ಕುಪ್ಪಂ : 8431403419

SMVB : 09606005129

KJM :+91 88612 03980

.

Vishwa News 24

Recent Posts

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

1 hour ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

1 hour ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

2 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

2 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

2 hours ago

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago