ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

Featured, ರಾಜ್ಯ ನ್ಯೂಸ್

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು

ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ ದಾರುಣ ಘಟನೆ ಮೈಸೂರು  ಜಿಲ್ಲೆಯ ಹುಣಸೂರು ತಾಲೂಕಿನ ದೊಡ್ಡ ಹೆಜ್ಜೂರು ಗ್ರಾಮದಲ್ಲಿ ನಡೆದಿದೆ.

ಮನೆಯ ಹೊಸಲಿನಲ್ಲಿ ಪೂಜೆಗೆ ಇರಿಸಿದ್ದ ದಾಸವಾಳದ ಹೂವನ್ನು ಆರೂವರೆ ತಿಂಗಳ ಮಗು ನುಂಗಿದ ಪರಿಣಾಮ ಉಸಿರುಗಟ್ಟಿ ಸಾವನ್ನಪ್ಪಿದೆ. ದೊಡ್ಡಹೆಜ್ಜೂರಿನ ಸುದರ್ಶನ್-ನವ್ಯ ದಂಪತಿಯ ಎರಡನೇ ಪುತ್ರ ಆರೂವರೆ ತಿಂಗಳ ಚಿನ್ಮಯಿಗೌಡ ಸಾವನ್ನಪ್ಪಿದ ಮಗು.

ಇದನ್ನೂ ಓದಿ: 

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ತನ್ನ ಅಣ್ಣನೊಂದಿಗೆ ಆಟವಾಡುತ್ತಿದ್ದ ಚಿನ್ಮಿಯಿಗೌಡ, ಮನೆಯ ಹೊಸಲಿಗೆ ಪೂಜೆಗೆ ಇಟ್ಟಿದ್ದ ದಾಸವಾಳದ ಹೂವಿನ ತುಂಡನ್ನು ಬಾಯಿಗೆ ಹಾಕಿಕೊಂಡಿದೆ. ಈ ವೇಳೆ ಅಣ್ಣ ಕಿತ್ತುಕೊಳ್ಳುತ್ತಾನೆಂದು ಮಗು ಒಣಗಿದ ಹೂವನ್ನು ನುಂಗಿದ್ದರಿಂದ ಉಸಿರಾಟದ ತೊಂದರೆಯಾಗಿ ಅಸ್ವಸ್ಥಗೊಂಡಿದೆ. ಇದನ್ನೂ ಓದಿ: ಬಹುನಿರೀಕ್ಷಿತ ಬೆಂಗಳೂರು ಬ್ಯುಸಿನೆಸ್ ಕಾರಿಡಾರ್‌ಗೆ ಟೆಂಡರ್ ಆಹ್ವಾನಿಸಿದ ಬಿಡಿಎ

ತಕ್ಷಣವೇ ಹನಗೋಡಿನ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ.

ಇದನ್ನೂ ಓದಿ: 

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

Leave a Reply