ಗುವಾಹಟಿ : ‘ರಾಷ್ಟ್ರೀಯ ಪೌರತ್ವ ನೋಂದಣಿಯನ್ನು (ಎನ್‌ಆರ್‌ಸಿ) ಕಾಲಮಿತಿಯೊಳಗೆ ಪೂರ್ಣಗೊಳಿಸಲಾಗುವುದು ಮತ್ತು ಅಕ್ರಮವಾಗಿ ವಲಸೆ ಬಂದವರಿಗೆ ಇಲ್ಲಿ ಉಳಿಯಲು ಅವಕಾಶ ನೀಡುವುದಿಲ್ಲ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಸ್ಪಷ್ಟಪಡಿಸಿದರು.
ದೇಶದಲ್ಲಿ ಒಬ್ಬನೇ ಅಕ್ರಮ ವಲಸಿಗರಿಗೆ ಉಳಿದುಕೊಳ್ಳಲು ಇನ್ಮುಂದೆ ಜಾಗವಿಲ್ಲ ಎಂದು ಬಿಜೆಪಿ ಚಾಣಕ್ಯ ಅಮಿತ್ ಶಾ ಅಸ್ಸಾಂನಲ್ಲಿ ಗುಡುಗಿದ್ದಾರೆ.
ಈಶಾನ್ಯ ಮಂಡಳಿಯ (ಎನ್‌ಇಸಿ) ಅಧ್ಯಕ್ಷರೂ ಆಗಿರುವ ಶಾ ಅವರು ಭಾನುವಾರ ಎನ್‌ಇಸಿಯ 68ನೇ ಅಧಿವೇಶನದಲ್ಲಿ ಈಶಾನ್ಯದ ಎಂಟು ರಾಜ್ಯಗಳ ಮುಖ್ಯಮಂತ್ರಿಗಳನ್ನು ಉದ್ದೇಶಿಸಿ ಮಾತನಾಡಿದರು.
ಗೃಹ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ತಮ್ಮ ಮೊದಲ ಅಸ್ಸಾಂ ಭೇಟಿಯಲ್ಲಿ ರಾಷ್ಟ್ರೀಯ ಪೌರತ್ವ ನೊಂದಣಿ ಬಗ್ಗೆ ಅಮಿತ್ ಶಾ ಮಾತನಾಡಿದ್ದಾರೆ.
ಎನ್,ಆರ್.ಸಿ ಕುರಿತಾಗಿ ವಿವಿಧ ರೀತಿಯ ಪ್ರಶ್ನೆಗಳು, ಅಭಿಪ್ರಾಯ ವ್ಯಕ್ತವಾಗುತ್ತಿದೆ ಆದರೆ ಅಕ್ರಮ ವಲಸಿಗರ ವಿರುದ್ಧ ಕಠಿಣ ಕ್ರಮಕ್ಕೆ ಕೇಂದ್ರ ಸರ್ಕಾರ ಬದ್ದವಾಗಿದ್ದು, ಒಬ್ಬನೇ ಒಬ್ಬ ಅಕ್ರಮ ವಲಸಿಗನಿಗೆ ದೇಶದಲ್ಲಿ ಉಳಿದುಕೊಳ್ಳಲು ಅವಕಾಶ ನೀಡೋಲ್ಲ ಎಂದು ಅಮಿತ್ ಶಾ ಗುಡುಗಿದ್ದಾರೆ.
ಈಶಾನ್ಯ ರಾಜ್ಯಗಳಿಗೆ ನೀಡಲಾಗಿರುವ ವಿಶೇಷ ಸ್ಥಾನಮಾನ 371 ಅನುಚ್ಚೇದವನ್ನು ರದ್ದು ಮಾಡುವ ಯಾವುದೇ ಉದ್ದೇಶವನ್ನು ಕೇಂದ್ರ ಸರ್ಕಾರ ಹೊಂದಿಲ್ಲ ಎಂದು ಹೇಳಿದರು. ರಾಷ್ಟ್ರೀಯ ಪೌರತ್ವ ನೊಂದಣಿ ದಾಖಲೆ ಅಂತಿಮ ಪಟ್ಟಿ ಬಿಡುಗಡೆಯಾಗಿದ್ದು, 19 ಲಕ್ಷಕ್ಕೂ ಅಧಿಕ ಜನರು ಎನ್ ಆರ್ ಸಿ ಪಟ್ಟಿಯಿಂದ ಹೊರಗುಳಿಸಿದ್ದು, 3.11 ಕೋಟಿ ಜನರನ್ನು ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದರು .
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…