Featured

ಒಬ್ಬ ಕ್ರಿಮಿನಲ್ ಆರೋಪಿಯನ್ನು ಸಮರ್ಥಿಸುವಂತಹ ದುಸ್ಥಿತಿ ಒಂದು ರಾಷ್ಟ್ರೀಯ ಪಕ್ಷಕ್ಕೆ ಬರಬಾರದಿತ್ತು : ಸಿಎಂ ಸಿದ್ದರಾಮಯ್ಯ – vishwanews24

ಒಬ್ಬ ಕ್ರಿಮಿನಲ್ ಆರೋಪಿಯನ್ನು ಸಮರ್ಥಿಸುವಂತಹ ದುಸ್ಥಿತಿ ಒಂದು ರಾಷ್ಟ್ರೀಯ ಪಕ್ಷಕ್ಕೆ ಬರಬಾರದಿತ್ತು : ಸಿಎಂ ಸಿದ್ದರಾಮಯ್ಯ

ವ್ಯಕ್ತಿಯೊಬ್ಬ ಎಂತಹ ಘನಘೋರ ಅಪರಾಧ ಬೇಕಾದ್ರೂ ಎಸಗಲಿ, ಆತ ಕೇಸರಿ ಶಾಲನ್ನು ತಲೆಗೆ ಸುತ್ತಿಕೊಂಡು ನಾನೊಬ್ಬ ಹಿಂದೂ ಎಂದು ಕೂಗಿದರೆ ಬಿಜೆಪಿ ನಾಯಕರು ಆತನ ರಕ್ಷಣೆಗೆ ಧಾವಿಸುತ್ತಾರೆ.

ಬೆಂಗಳೂರು: ಕರಸೇವಕನ ಬಂಧನ ಖಂಡಿಸಿ ಬಿಜೆಪಿ ನಡೆಸಿರುವ ಪ್ರತಿಭಟನೆಗೆ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ. ಒಬ್ಬ ಕ್ರಿಮಿನಲ್ ಆರೋಪಿಯನ್ನು ಸಮರ್ಥಿಸುವಂತಹ ದುಸ್ಥಿತಿ ಒಂದು ರಾಷ್ಟ್ರೀಯ ಪಕ್ಷಕ್ಕೆ ಬರಬಾರದಿತ್ತು ಎಂದು ವಾಗ್ದಾಳಿ ನಡೆಸಿದ್ದಾರೆ.

ವ್ಯಕ್ತಿಯೊಬ್ಬ ಎಂತಹ ಘನಘೋರ ಅಪರಾಧ ಬೇಕಾದ್ರೂ ಎಸಗಲಿ, ಆತ ಕೇಸರಿ ಶಾಲನ್ನು ತಲೆಗೆ ಸುತ್ತಿಕೊಂಡು ನಾನೊಬ್ಬ ಹಿಂದೂ ಎಂದು ಕೂಗಿದರೆ ಬಿಜೆಪಿ ನಾಯಕರು ಆತನ ರಕ್ಷಣೆಗೆ ಧಾವಿಸುತ್ತಾರೆ. ಈ ಮೂಲಕ ಕೇಸರಿ ಶಾಲು ಮಾತ್ರವಲ್ಲ ಹಿಂದೂ ಧರ್ಮಕ್ಕೂ ಬಿಜೆಪಿ ನಾಯಕರು ಅವಮಾನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಜೈಲಲ್ಲಿ ಹಿಂದೂಗಳೇ ಹೆಚ್ಚಿದ್ದಾರೆ. ಅವರ ಪರವಾಗಿ ಬಿಜೆಪಿ (BJP) ಹೋರಾಟ ನಡೆಸುತ್ತಾ? ಎಂದು ಸಿಎಂ ಸವಾಲ್ ಹಾಕಿದ್ದಾರೆ. ಅಲ್ಲದೇ ಈ ಹಿಂದೆ ಬಿಜೆಪಿ ಅವಧಿಯಲ್ಲೇ ಯಡಿಯೂರಪ್ಪರನ್ನು ಬಂಧಿಸಿ ಜೈಲಿಗಟ್ಟಲಾಗಿತ್ತು. ಇದು ಆಗಿನ ಸರ್ಕಾರದ ಹಿಂದು ವಿರೋಧಿಯೇ ಎಂದು ಪ್ರಶ್ನಿಸಿದ್ದಾರೆ. ಹಾಗೆ ನೋಡಿದ್ರೆ ಬಿಎಸ್‍ವೈಗಿಂತ ದೊಡ್ಡ ಹಿಂದೂ ಯಾರಿದ್ದಾರೆ? ಅವರಿಗಿಂತ ದೊಡ್ಡ ರಾಮ ಭಕ್ತ ಯಾರಿದ್ದಾರೆ? ಎಂದು ಮುಖ್ಯಮಂತ್ರಿಗಳು ಕೇಳಿದ್ದಾರೆ.

ಇನ್ನು, ಹಳೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಬಂಧಿಸಿದ 36 ಆರೋಪಿಗಳ ಪಟ್ಟಿಯನ್ನು ಸಿಎಂ ಬಿಡುಗಡೆ ಮಾಡಿದ್ದಾರೆ. ಅದ್ರಲ್ಲಿ ಶ್ರೀಕಾಂತ ಪೂಜಾರಿಯನ್ನು ದೊಂಬಿ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ಉಲ್ಲೇಖಿಸಲಾಗಿದೆ. ಈ ಮೂಲಕ ಶ್ರೀಕಾಂತ್ ಕರಸೇವಕ ಎಂಬ ಕಾರಣಕ್ಕೆ ಬಂಧಿಸಿಲ್ಲ, ಟಾರ್ಗೆಟ್ ಮಾಡಿಲ್ಲ, ಬಿಜೆಪಿ ಆರೋಪಗಳೆಲ್ಲಾ ಸುಳ್ಳು ಎಂಬ ಸಂದೇಶವನ್ನು ಸಿಎಂ ನೀಡಿದ್ದಾರೆ

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

18 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

18 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

19 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

19 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

19 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

20 hours ago