ಮುಂಬೈ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರತಿಯೊಂದು ಸಾರ್ವಜನಿಕ ಕಾರ್ಯಕ್ರಮದಲ್ಲಿ 70 ವರ್ಷಗಳಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನೆ ಮಾಡುತ್ತಾರೆ. ಒಬ್ಬ ಚಾಯ್‍ವಾಲಾ ದೇಶದ ಪ್ರಧಾನಿ ಆಗುವಂತೆ ಪ್ರಜಾಪ್ರಭುತ್ವವನ್ನು ಉಳಿಸಿಕೊಂಡು ಬಂದಿದ್ದೇವೆ ಎಂದು ಸಂಸದೀಯ ನಾಯಕ ಹಾಗು ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿ ಮಲ್ಲಿಕಾರ್ಜುನ್ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮಹಾರಾಷ್ಟ್ರ ಉಸ್ತುವಾರಿಯನ್ನು ವಹಿಸಿಕೊಂಡಿರುವ ಮಲ್ಲಿಕಾರ್ಜುನ್ ಖರ್ಗೆ ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ, ಮೋದಿಯವರು 43 ವರ್ಷಗಳ ಹಿಂದಿನ ದೇಶದ ತುರ್ತು ಪರಿಸ್ಥಿತಿಯ ಬಗ್ಗೆ ಪದೇ ಪದೇ ಮಾತನಾಡುತ್ತಾರೆ. ಆದರೆ ಕಳೆದ 4 ವರ್ಷಗಳಿಂದ ದೇಶದಲ್ಲಿನ ಅಘೋಷಿಯ ತುರ್ತು ಪರಿಸ್ಥಿತಿಯ ಬಗ್ಗೆ ಏಕೆ ಮಾತನಾಡಲ್ಲ ಎಂದು ಪ್ರಶ್ನೆ ಮಾಡಿದರು.
ರೈತ ಬಾಂಧವರಿಗೆ ಕೇಂದ್ರ ಜಾರಿಗೆ ತಂದಿರುವ ಯೋಜನೆಗಳು ವಿಫಲಗೊಂಡಿವೆ. ಈ ಹಿನ್ನೆಲೆಯಲ್ಲಿ ರೈತರ ಆತ್ಮಹತ್ಯೆಯ ಸಂಖ್ಯೆಯೂ ಹೆಚ್ಚುತ್ತಿದೆ. ರೈತರಿಗೆ ಹೊಸ ಸಾಲಗಳು ಸಿಗುತ್ತಿಲ್ಲ. ಮಾರುಕಟ್ಟೆ ನಿಧಾನಗತಿಯಲ್ಲಿ ಸಾಗುತ್ತಿದ್ದು, ರೈತರಿಗೆ ಕನಿಷ್ಠ ಬೆಂಬಲ ಬೆಲೆಯೂ ಸಿಗದಂತಾಗಿದೆ ಎಂದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…