ಕೊಪ್ಪಳ : ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಚಾರಕ್ಕೆಂದು ಕೊಪ್ಪಳಕ್ಕೆ ಆಗಮಿಸಿದ್ದ ಬಿಜೆಪಿ ಶಾಸಕ ಶ್ರೀರಾಮುಲು ಸರಕಾರದ ವಿರುದ್ಧ ಹರಿಹಾಯ್ದರು. ಅಲ್ಲದೆ, ಸಿಎಂ ಕುಮಾರಸ್ವಾಮಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಏಕವಚನದಿಂದಲೇ ತರಾಟೆಗೆ ತೆಗೆದುಕೊಂಡರು. ರಾಜ್ಯದಲ್ಲಿ ಮೈತ್ರಿ ಸರಕಾರ ಅಸ್ತಿತ್ವಕ್ಕೆ ಬಂದ ನಂತರ ಒಬ್ಬ ರೈತನ ಸಾಲ ಮನ್ನಾ ಆಗಿದ್ದರೂ ಈ ಕ್ಷಣವೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಬಿಜೆಪಿ ಶಾಸಕ ಶ್ರೀರಾಮುಲು ಸವಾಲು ಹಾಕಿದ್ದಾರೆ.
ಸಿಎಂ ಕುಮಾರಸ್ವಾಮಿ ಎಲ್ಲ ಕೆಲಸವನ್ನು ಕಾಟಾಚಾರಕ್ಕೆ ಮಾಡುತ್ತಾರೆ. ಅವರಿಗೆ ಅಧಿಕಾರ ಬೇಕೇ ಹೊರತು ಜನಸೇವೆಯಲ್ಲ. ಕೊಡಗಿನಲ್ಲಿ ಸಂತ್ರಸ್ತರು ಸಂಕಷ್ಟ ಅನುಭವಿಸುತ್ತಿದ್ದರೂ ತಡವಾಗಿ ನೆರೆಪೀಡಿತ ಪ್ರದೇಶಗಳಿಗೆ ಕಾಟಾಚಾರದ ಭೇಟಿ ನೀಡಿ ಒಂದೇ ಗಂಟೆಯಲ್ಲಿ ವಾಪಸಾಗುತ್ತಿದ್ದರು. ಮಾಧ್ಯಮಗಳು ಅವರನ್ನು ಒಂದು ದಿನ ಕೊಡಗಿನಲ್ಲಿ ಉಳಿಯುವಂತೆ ಮಾಡಿದವು. ರೈತರ ಸಾಲ ಮನ್ನಾ ಮಾಡುವುದಾಗಿ ಹೇಳಿಕೊಂಡೇ ಅಧಿಕಾರಕ್ಕೆ ಬಂದ ಕುಮಾರಸ್ವಾಮಿ, ಇವತ್ತಿನವರಿಗೆ ಬ್ಯಾಂಕ್ಗಳಿಗೆ ಸಾಲ ಮನ್ನಾ ಮಾಡಿರುವ ಆದೇಶ ಪ್ರತಿಯನ್ನು ಬ್ಯಾಂಕ್ಗಳಿಗೆ ಕೊಟ್ಟಿಲ್ಲ. ಏನೇ ಕೇಳಿದರೂ ಎಲ್ಲದಕ್ಕೂ ಕುಂಟುನೆಪ ಹೇಳುತ್ತಾರೆ.
ರಾಜ್ಯದಲ್ಲಿ ಒಬ್ಬನೇ ಒಬ್ಬ ರೈತನ ಸಾಲ ಮನ್ನಾ ಆಗಿದೆ ಎಂದರೆ ಈ ಕ್ಷಣವೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ರಾಜಕೀಯ ನಿವೃತ್ತಿ ಹೊಂದುವುದಾಗಿ ಘೋಷಿಸಿದರು. ಬಳಿಕ ಕೊಪ್ಪಳ ನಗರಸಭೆ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ ಅವರು, ಪಕ್ಷದ ಪ್ರಣಾಳಿಕೆ ಬಿಡುಗಡೆಗೊಳಿಸಿದರು. ಇದೇ ವೇಳೆ ದಿ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಚಿತಾಭಸ್ಮವನ್ನು ಸಾರ್ವಜನಿಕ ಮೈದಾನದಲ್ಲಿ ಪ್ರದರ್ಶನಕ್ಕೆ ಇಡಲಾಯಿತು. ನಗರದಲ್ಲೆಡೆ ವಾಜಪೇಯಿ ಭಾವಚಿತ್ರ ಮೆರವಣಿಗೆ ನಡೆಸಿ ಸ್ಮರಿಸಲಾಯಿತು.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…