ಒಬ್ಬ ಹಿಂದೂ ಎಂದಿಗೂ ಭಯೋತ್ಪಾದಕನಾಗಲು ಸಾಧ್ಯವಿಲ್ಲ : ಅಮಿತ್ ಶಾ – Vishwanews24

Featured, ದೇಶ, ರಾಷ್ಟ್ರ ನ್ಯೂಸ್

ಭೋಪಾಲ್: ಮಾಲೆಗಾಂವ್ ಸ್ಫೋಟದ ಆರೋಪಿ ಸಾಧ್ವಿ ಪ್ರಜ್ಞಾ ಅವರನ್ನು ಭೋಪಾಲ್‌ನಿಂದ ಕಣಕ್ಕಿಳಿಸಿರುವುದನ್ನು ಸಮರ್ಥಿಸಿಕೊಂಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಹಿಂದೂವೊಬ್ಬ ಎಂದಿಗೂ ಭಯೋತ್ಪಾದಕನಾಗಲು ಸಾಧ್ಯವಿಲ್ಲ ಎಂದಿದ್ದಾರೆ.

ಮಧ್ಯಪ್ರದೇಶದ ಛತ್ರಪುರದಲ್ಲಿ ಮಂಗಳವಾರ ಚುನಾವಣಾ ಪ್ರಚಾರ ನಡೆಸಿದ ಅವರು, ಹಿಂದೂ ಎಂದಿಗೂ ಭಯೋತ್ಪಾದಕನಾಗಲು ಸಾಧ್ಯವಿಲ್ಲ. ಸನಾತನ ಸಂಸ್ಕೃತಿ ಎಂದಿಗೂ, ಯಾರಿಗೂ ಹಾನಿ ಮಾಡಿಲ್ಲ. ಆದರೆ ಕಾಂಗ್ರೆಸ್ ಇದಕ್ಕೆ ಉಗ್ರವಾದ ಹಣೆಪಟ್ಟಿ ಕಟ್ಟಿದೆ. ಸಾಧ್ವಿ ಭೋಪಾಲ್ದಿಂದ ಕಣಕ್ಕಿಳಿಯುತ್ತಿರುವುದು ಕಾಂಗ್ರೆಸ್‌ನ ಈ ಆರೋಪದ ವಿರುದ್ಧ ನಡೆಸುತ್ತಿರುವ ಸತ್ಯಾಗ್ರಹ ಎಂದಿದ್ದಾರೆ.

ಕಾಂಗ್ರೆಸ್ ಹಿರಿಯ ನಾಯಕ, ಭೋಪಾಲ್ ಅಭ್ಯರ್ಥಿ ದಿಗ್ವಿಜಯ್ ಸಿಂಗ್ ವಿರುದ್ಧ ಹರಿಹಾಯ್ದ ಅವರು, ಮಧ್ಯಪ್ರದೇಶದ ಜನರು ದಿಗ್ಗಿ ರಾಜನಿಗಾಗಿ ಕಾಯುತ್ತಿದ್ದು, ಹಿಂದೂ ಉಗ್ರ ಹೇಳಿಕೆ ನೀಡಿದ್ದಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದವರು ಹೇಳಿದ್ದಾರೆ.