Featured

ಒಬ್ಬ ಹೇಡಿ ಮಾಡಿದ ಕೃತ್ಯದಿಂದ ಇಡೀ ಸಮುದಾಯವನ್ನು ವಿರೋಧಿಸುವುದು ಸರಿಯಲ್ಲ : ಅಬ್ದುಲ್ ರಜಾಕ್ – Vishwanews24

ಒಬ್ಬ ಹೇಡಿ ಮಾಡಿದ ಕೃತ್ಯದಿಂದ ಇಡೀ ಸಮುದಾಯವನ್ನು ವಿರೋಧಿಸುವುದು ಸರಿಯಲ್ಲ

ನಮ್ಮ ಧರ್ಮದಲ್ಲಿ ಇಂತಹ ಕೃತ್ಯ ಮಾಡಿ ಎಂದು ಎಲ್ಲಿಯೂ ಹೇಳಿಲ್ಲ..

ಸರ್ಕಾರ ತಕ್ಷಣ ತನಿಖೆ ನಡೆಸಿ, ಅವರನ್ನು ಗಲ್ಲಿಗೇರಿಸಿ..

ಬೆಂಗಳೂರು: ಒಬ್ಬ ಹೇಡಿ ಮಾಡಿದ ಕೃತ್ಯದಿಂದ ಇಡೀ ಸಮುದಾಯವನ್ನು ವಿರೋಧಿಸುವುದು ಸರಿಯಲ್ಲ. ನಮ್ಮ ಧರ್ಮದಲ್ಲಿ ಇಂತಹ ಕೃತ್ಯ ಮಾಡಿ ಎಂದು ಎಲ್ಲಿಯೂ ಹೇಳಿಲ್ಲ ಎಂದು ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ಹೇಳಿಕೆ ನೀಡಿದ್ದಾರೆ.

ರಾಜಸ್ಥಾನದಲ್ಲಿ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿದ್ದ ಟೈಲರ್‌ನನ್ನು ಬರ್ಬರವಾಗಿ ಹತ್ಯೆಗೈದ ಘಟನೆಗೆ ಜನರು ಮುಸ್ಲಿಂ ಸಮುದಾಯವನ್ನು ದೂಷಿಸುತ್ತಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಅಬ್ದುಲ್ ರಜಾಕ್, ಈ ಕೃತ್ಯ ಮಾಡಿದವರು ಹೇಡಿಗಳು. ಇವರ ಹಿಂದೆ ಯಾರೋ ಇದ್ದಾರೆ. ಎಲ್ಲಾ ಮುಗಿದು ಸಮಾಧಾನವಾಗಿದ್ದ ಸಂದರ್ಭದಲ್ಲಿ ಇಂತಹ ಘಟನೆ ನಡೆದಿದೆ ಎಂದು ಹೇಳಿದರು.

ನಾನು ಈ ಘಟನೆಯನ್ನು ಖಂಡಿಸುತ್ತೇನೆ. ಅವರ ಹಿಂದೆ ಯಾರೋ ಇದ್ದಾರೆ ಎನ್ನುವುದು ಸತ್ಯ. ಘಟನೆ ಬಗ್ಗೆ ಸರ್ಕಾರ ತಕ್ಷಣ ತನಿಖೆ ನಡೆಸಿ, ಅವರನ್ನು ಗಲ್ಲಿಗೇರಿಸಬೇಕು. ನೂಪುರ್ ಶರ್ಮಾರನ್ನು ಕೂಡಾ ಬಿಡದೇ ಬಂಧಿಸಬೇಕು. ಅವರನ್ನೂ ಕಾನೂನಿನ ಅಡಿಯಲ್ಲಿ ಶಿಕ್ಷೆಗೆ ಒಳಪಡಿಸಬೇಕು. ಇಂತಹ ಘಟನೆಗಳಿಂದ ಒಂದೇ ಸಮುದಾಯವನ್ನು ಟಾರ್ಗೆಟ್ ಮಾಡಬೇಡಿ ಎಂದು ಅಬ್ದುಲ್ ರಜಾಕ್ ಮನವಿ ಮಾಡಿಕೊಂಡರು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

22 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

22 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

22 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

23 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

23 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago