ಮಸ್ಕತ್: ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್ ಪಲ್ಟಿಯಾಗಿ 13 ಮಂದಿ ಭಾರತೀಯರು ಸೇರಿದಂತೆ ಒಟ್ಟು 16 ಮಂದಿ ನಾಪತ್ತೆಯಾಗಿದ್ದಾರೆ ಎಂದು ದೇಶದ ಕಡಲ ಭದ್ರತಾ ಕೇಂದ್ರ ಮಾಹಿತಿ ನೀಡಿದೆ.
ಟ್ಯಾಂಕರ್ ನಲ್ಲಿದ್ದವರೆಲ್ಲರು ನಾವತ್ತೆಯಾಗಿದ್ದು, ಅವರ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಕೊಮೊರೊಸ್ ಧ್ವಜ ಇರುವ ತೈಲ ಟ್ಯಾಂಕರ್ ಪ್ರೆಸ್ಟೀಜ್ ಫಾಲ್ಕನ್ ಸಿಬ್ಬಂದಿಯಲ್ಲಿ 13 ಭಾರತೀಯರು ಮತ್ತು 3 ಮಂದಿ ಶ್ರೀಲಂಕಾದವರು ಇದ್ದರು. ಒಮಾನಿ ಬಂದರು ಡುಕ್ಮ್ ಬಳಿ ರಾಸ್ ಮದರಕಾದಿಂದ ಆಗ್ನೇಯಕ್ಕೆ 25 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಹಡಗು ಮುಳುಗಡೆಯಾಗಿದೆ.
ಟ್ಯಾಂಕರ್ ಒಮಾನ್ ಬಂದರಿನ ಏಡೆನ್‌ಗೆ ತೆರಳುತ್ತಿತ್ತು. ತೈಲ ಟ್ಯಾಂಕರ್ ನೀರಿನಲ್ಲಿ ಮುಳುಗಡೆಯಾಗಿದ್ದು, ತಲೆಕೆಳಗಾಗಿ ಬಿದ್ದಿದೆ. ಆದರೆ ಹಡಗು ಸ್ಥಿರವಾಗಿದೆಯೇ ಅಥವಾ ಸಮುದ್ರಕ್ಕೆ ತೈಲ ಸೋರಿಕೆಯಾಗುತ್ತಿದೆಯೇ ಎಂಬುದು ಇನ್ನೂ ತಿಳಿದುಬಂದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…