ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಶಶಿ ತರೂರ್ ವಿವಾದಾದ್ಮಕ ಹೇಳಿಕೆ ನೀಡಿದ್ದಾರೆ. ಬ್ರಾಬಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಬಹುತೇಕ ಹಿಂದೂಗಳು ಅಯೋಧ್ಯೆ ರಾಮನ ಜನ್ಮಸ್ಥಳ ಎಂದು ನಂಬಿದ್ದಾರೆ. ಆದ್ರೆ ಯಾವೊಬ್ಬ ಒಳ್ಳೆ ಹಿಂದೂ ಕೂಡ ಬೇರೆಯವರ ಪ್ರಾರ್ಥನಾ ಸ್ಥಳವನ್ನು ಧ್ವಂಸ ಮಾಡಿ ರಾಮ ಮಂದಿರ ನಿರ್ಮಿಸಲು ಬಯಸುವುದಿಲ್ಲ ಎಂದು ಹೇಳಿದ್ದು ಚರ್ಚೆಗೆ ಗ್ರಾಸವಾಗಿದೆ.
ಚೆನ್ನೈನಲ್ಲಿ ನಡೆದ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು, 2019ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಕೋಮುವಾದವನ್ನ ಆಶ್ರಯಿಸಬಹುದು ಎಂದು ಹೇಳಿದರು,.
ಮುಂಬರುವ ಕೆಲವು ತಿಂಗಳಲ್ಲಿ ಮತ್ತಷ್ಟು ಅಹಿತಕರ ಘಟನೆಗಳಿಗೆ ನಾವು ತಯಾರಾಗಬೇಕು. ಯಾಕಂದ್ರೆ ಆಡಳಿತ ಪಕ್ಷ ರಾಜಕೀಯ ಲಾಭಕ್ಕಾಗಿ ಕೋಮು ಉದ್ವಿಗ್ನತೆಯನ್ನ ಹೆಚ್ಚಿಸಬಹುದು. ಈ ಹಿಂದಿನ ಘಟನೆಗಳನ್ನ ನೋಡುವುದಾದರೆ ಚುನಾವಣೆ ಹಾಗೂ ಕೋಮು ಸಂಘರ್ಷಕ್ಕೆ ಪರಸ್ಪರ ಸಂಬಂಧ ವಿರೋದವನ್ನುಕಾಣಬಹುದು ಎಂದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…