Featured

ಓಮಿಕ್ರಾನ್ ಆತಂಕ : ಜಿಲ್ಲಾಮಟ್ಟದಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸಿ : ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರಕಾರ ಸೂಚನೆ  – Vishwanews24

ಓಮಿಕ್ರಾನ್ ಆತಂಕ : ಜಿಲ್ಲಾಮಟ್ಟದಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸಿ : ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರಕಾರ ಸೂಚನೆ  – Vishwanews24

ನವದೆಹಲಿ: ಓಮಿಕ್ರಾನ್ ರೂಪಾಂತರವು ಡೆಲ್ಟಾಕ್ಕಿಂತ ಕನಿಷ್ಠ ಮೂರು ಪಟ್ಟು ಹೆಚ್ಚು ಸಾಂಕ್ರಾಮಿಕವಾಗಿದ್ದು, ಜಿಲ್ಲಾ ಮಟ್ಟದಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸಲು ಕೇಂದ್ರ ಸರಕಾರವು ಎಲ್ಲಾ ರಾಜ್ಯಗಳಿಗೆ ಸೂಚನೆ ನೀಡಿದೆ.

ಭಾರತದಲ್ಲಿ ಕೋವಿಡ್ 19 ಪ್ರಕರಣಗಳ ಉಲ್ಬಣದ ಆರಂಭಿಕ ಚಿಹ್ನೆಗಳು ಮತ್ತು ದೇಶದ ವಿವಿಧ ಭಾಗಗಳಲ್ಲಿ ಓಮಿಕ್ರಾನ್ ರೂಪಾಂತರದ ಹೆಚ್ಚಿದ ಪತ್ತೆ ಹಚ್ಚುವಿಕೆಯ ದೃಷ್ಟಿಯಿಂದ ಕಠಿಣ ಕ್ರಮಗಳ ಅಗತ್ಯ ಇದೆ ಎಂದು ಕೇಂದ್ರ ಸರಕಾರ ತಿಳಿಸಿದೆ.

ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಎಲ್ಲಾ ಮುಖ್ಯ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ, ಒಂದು ವಾರದ ಅವಧಿಯಲ್ಲಿ ಕೋವಿಡ್‌ ದೃಢಪಡುವ ಪ್ರಮಾಣವು ಶೇ 10ರಷ್ಟು ಮತ್ತು ಅದಕ್ಕಿಂತ ಹೆಚ್ಚು ಇರುವ ಜಿಲ್ಲೆಗಳಲ್ಲಿ ನಿಯಂತ್ರಣ ಕ್ರಮಗಳು ಮತ್ತು ನಿರ್ಬಂಧಗಳನ್ನು ಜಾರಿಗೆ ತನ್ನಿ. ಜಿಲ್ಲೆಯಲ್ಲಿ ಲಭ್ಯವಿರುವ ತೀವ್ರ ನಿಗಾ ಘಟಕಗಳು ಮತ್ತು ಆಮ್ಲಜನಕ ಪೂರೈಕೆ ವ್ಯವಸ್ಥೆ ಇರುವ ಹಾಸಿಗೆಗಳ ಭರ್ತಿ ಪ್ರಮಾಣವು ಶೇ 40ನ್ನು ದಾಟಿದರೆ, ಆ ಜಿಲ್ಲೆಗಳಲ್ಲೂ ನಿಯಂತ್ರಣ ಕ್ರಮ ಮತ್ತು ನಿರ್ಬಂಧಗಳನ್ನು ಜಾರಿಗೆ ತನ್ನಿ’ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ರಾಜ್ಯ ಸರ್ಕಾರಗಳಿಗೆ ಬರೆದಿರುವ ಪತ್ರದಲ್ಲಿ ಸೂಚಿಸಿದ್ದಾರೆ.

ಡೆಲ್ಟಾಗಿಂತ ಓಮೈಕ್ರಾನ್‌ ರೂಪಾಂತರ ತಳಿಯು ಮೂರು ಪಟ್ಟು ಹೆಚ್ಚು ತೀವ್ರವಾಗಿ ಹರಡುತ್ತದೆ. ಜತೆಗೆ ದೇಶದ ಹಲವೆಡೆ ಇನ್ನೂ ಡೆಲ್ಟಾ ಪ್ರಕರಣಗಳು ಇವೆ. ಇವುಗಳನ್ನು ಗಮನದಲ್ಲಿ ಇರಿಸಿಕೊಂಡು ಜಿಲ್ಲಾ ಮಟ್ಟದಲ್ಲಿ ಅಗತ್ಯ ನಿಯಂತ್ರಣ ಕ್ರಮಗಳನ್ನು ತೆಗೆದುಕೊಳ್ಳುವ ಅಗತ್ಯವಿದೆ’ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago