ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾಗಿದ್ದು, ಆತಂಕ ಮೂಡಿಸಿದೆ. ಹೊಸ ತಳಿ ನಿಯಂತ್ರಣಕ್ಕಾಗಿ ಸರ್ಕಾರ ಹಲವು ನಿರ್ಬಂಧಗಳನ್ನು ವಿಧಿಸಲು ಮುಂದಾಗಿದೆ. ಮದುವೆ ಸಮಾರಂಭಗಳಲ್ಲಿ ಪಾಲ್ಗೊಳ್ಳುವವರ ಸಂಖ್ಯೆಯನ್ನು 500ಕ್ಕೆ ಮಿತಿಗೊಳಿಸಲು ಸರ್ಕಾರ ಮಾರ್ಗಸೂಚಿ ಹೊರಡಿಸಿದೆ.
ರಾಜ್ಯದಲ್ಲಿ ಓಮಿಕ್ರಾನ್ ಪತ್ತೆಯಾಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಸರ್ಕಾರ ತುರ್ತು ಸಭೆ ನಡೆಸಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಜರುಗಿತು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಆರ್.ಅಶೋಕ್, ಓಮಿಕ್ರಾನ್ ನಿಯಂತ್ರಿಸುವ ಉದ್ದೇಶದಿಂದ ಹಲವು ನಿರ್ಬಂಧಗಳನ್ನು ವಿಧಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ. ಮದುವೆ ಸಮಾರಂಭಗಳಲ್ಲಿ ಪಾಲ್ಗೊಳ್ಳುವವರ ಸಂಖ್ಯೆಯನ್ನು 500ಕ್ಕೆ ಸೀಮಿತಗೊಳಿಸಲು ನಿರ್ಧರಿಸಲಾಗಿದೆ. ಯಾವುದೇ ಸಮಾರಂಭಗಳಲ್ಲಿ ಹೆಚ್ಚು ಜನರು ಪಾಲ್ಗೊಳ್ಳುವುದರಿಂದ ಸೋಂಕು ವೇಗವಾಗಿ ಹರಡುವ ಭೀತಿ ಇದೆ. ಅದನ್ನು ಈಗಿನಿಂದಲೇ ತಪ್ಪಿಸುವುದು ಅನಿವಾರ್ಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಮೊಟ್ಟ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾದಲ್ಲಿ ಕಾಣಿಸಿಕೊಂಡಿದ್ದ ಕೊರೊನಾ ವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಈಗ ಭಾರತಕ್ಕೂ ಕಾಲಿಟ್ಟಿದೆ. ಕರ್ನಾಟಕದಲ್ಲಿ ಎರಡು ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರಿಬ್ಬರೂ ಬೆಂಗಳೂರಿನವರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಹಲವು ಮುಂಜಾಗ್ರತೆ ಕ್ರಮಕೈಗೊಳ್ಳಲು ಸರ್ಕಾರ ಮುಂದಾಗಿದೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…