ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ಪ್ರಕರಣಗಳು ಮುಂದಿನ ದಿನಗಳಲ್ಲಿ ಹೆಚ್ಚಾಗುವ ನಿರೀಕ್ಷೆಯಿದ್ದು, ವೈರಸ್ ಹರಡುವಿಕೆಯನ್ನು ನಿಯಂತ್ರಿಸುವ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಸೋಮವಾರ ಹೇಳಿದ್ದಾರೆ.
ಹೊಸ ರೂಪಾಂತರಿ ಪ್ರಕರಣಗಳು ಹೆಚ್ಚಾಗುವ ನಿರೀಕ್ಷಿತ ಇರುವ ಹಿನ್ನೆಲೆಯಲ್ಲಿ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ನಿಯಂತ್ರಣ ಕೊಠಡಿಗಳಲ್ಲಿನ ಸಿಬ್ಬಂದಿಗಳಿಗೆ ಆಲರ್ಟ್ ಆಗಿರುವಂತೆ ಸೂಚಿಸಲಾಗಿದೆ ಎಂದು ಗೌರವ್ ಗುಪ್ತಾ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ನಾಗರಿಕರು ಸಹ ಎಚ್ಚರದಿಂದಿರಬೇಕು ಮತ್ತು ಅವರಿಗೆ ಯಾವುದೇ ಪ್ರಕರಣಗಳು ತಿಳಿದಿದ್ದರೆ ಅಥವಾ ರೋಗಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ತಿಳಿಸಬೇಕು. ಪಾರ್ಟಿಗಳು ಮತ್ತು ಗೆಟ್‌ಟುಗೆದರ್‌ಗಳಲ್ಲಿ ಭಾಗವಹಿಸುವವರು ಅತ್ಯಂತ ಜಾಗರೂಕರಾಗಿರಬೇಕು ಎಂದು ಎಚ್ಚರಿಸಿದ್ದಾರೆ.
ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ಜಾರಿಗೆ ತರುವಂತೆ ಮತ್ತು ಜನರ ಓಡಾಟಕ್ಕೆ ನಿರ್ಬಂಧ ವಿಧಿಸುವಂತೆ ಹಾಗೂ ರಾತ್ರಿ ಸಂಚಾರಕ್ಕೆ ಪಾಸ್ ವ್ಯವಸ್ಥೆ ಜಾರಿಗೆ ತರುವಂತೆ ತಜ್ಞರ ಸಮಿತಿ ಸಲಹೆ ನೀಡಿದೆ. ಈ ಬಗ್ಗೆ ರಾಜ್ಯ ಸರ್ಕಾರವೇ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಗುಪ್ತಾ ಹೇಳಿದ್ದಾರೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…