Featured

ಓಮಿಕ್ರಾನ್ ಕಳವಳ : ನಾಳೆ ಸಿಎಂ ನೇತೃತ್ವದಲ್ಲಿ ಸಭೆ -Vishwanews24

ಓಮಿಕ್ರಾನ್ ಕಳವಳ : ನಾಳೆ ಸಿಎಂ ನೇತೃತ್ವದಲ್ಲಿ ಸಭೆ -Vishwanews24

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕು ಪ್ರಕರಣಗಳ ಸಂಖ್ಯೆ ವ್ಯಾಪಕವಾಗಿ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯಲಿದೆ.

ನಾಳಿನ ಸಭೆಯಲ್ಲಿ ರಾಜ್ಯದಲ್ಲಿ ಓಮಿಕ್ರಾನ್ ಸೋಂಕು ಪ್ರಕರಣಗಳ ಸ್ಥಿತಿಗತಿ ಬಗ್ಗೆ ಚರ್ಚೆ ನಡೆಯಲಿದೆ. ಅಲ್ಲದೇ ನೈಟ್ ಕರ್ಫ್ಯೂ ಜಾರಿ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಜೊತೆಗೆ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಕ್ತ ಕ್ರಮಕೈಗೊಳ್ಳುವ ಚಿಂತನೆಯನ್ನೂ ಸರ್ಕಾರ ನಡೆಸಿದೆ. ಪ್ರಕರಣಗಳ ಸಂಖ್ಯೆ ಏರುತ್ತಿರುವುದಕ್ಕೆ ಸಿಎಂ ಬೊಮ್ಮಾಯಿ ಆತಂಕ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಓಮಿಕ್ರಾನ್ ಸೋಂಕು ಪ್ರಕರಣಗಳ ಸಂಖ್ಯೆ ಏರುತ್ತಿದೆ. ಈವರೆಗೆ 31 ಓಮಿಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ದೇಶದಲ್ಲಿ ಅತಿಹೆಚ್ಚು ಓಮಿಕ್ರಾನ್ ಸೋಂಕು ಪ್ರಕರಣಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕಾರ್ನಾಟಕ 7ನೇ ಸ್ಥಾನದಲ್ಲಿದೆ.

ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಈಗಾಗಲೇ ಮಹಾರಾಷ್ಟ್ರ, ಉತ್ತರ ಪ್ರದೇಶ, ಮಧ್ಯಪ್ರದೇಶದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಇದೇ ಕ್ರಮವನ್ನು ರಾಜ್ಯದಲ್ಲೂ ಮತ್ತೆ ಜಾರಿಗೊಳಿಸುವ ಚಿಂತನೆಯನ್ನು ರಾಜ್ಯ ಸರ್ಕಾರ ನಡೆಸಿದೆ.

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

3 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

9 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

11 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

11 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

11 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

11 hours ago